ಬಾಗಲಕೋಟೆ : ಜಿಲ್ಲೆಯಲ್ಲಿ 468 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದಾರೆ. ಆದ್ರೆ ಹೊಸದಾಗಿ 112 ಕೊರೊನಾ ಪ್ರಕರಣಗಳು ಬುಧವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 10298 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 9285 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಸೋಂಕು ದೃಢಪಟ್ಟವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 1598 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 105111 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 92708 ನೆಗೆಟಿವ್ ಪ್ರಕರಣ, 10298 ಪಾಸಿಟಿವ್ ಪ್ರಕರಣ ಹಾಗೂ 106 ಮೃತ ಪ್ರಕರಣ ವರದಿಯಾಗಿರುತ್ತದೆ.
ಇನ್ನು 907 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 409 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 438 ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.