ಬಾಗಲಕೋಟೆ: ಜಿಲ್ಲೆಯಲ್ಲಿಂದು 115 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಮತ್ತು 81 ಸೋಂಕಿತರು ಕೋವಿಡ್‍ನಿಂದ ಗುಣಮುಖರಾದ ಹಿನ್ನೆಲೆ ಅವರನ್ನು ನಿಗದಿತ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ. ರಾಜೇಂದ್ರ ತಿಳಿಸಿದ್ದಾರೆ.
ಬಾಗಲಕೋಟೆ ತಾಲೂಕಿನ 14, ಬಾದಾಮಿ 23, ಹುನಗುಂದ 14, ಬೀಳಗಿ 17, ಮುಧೋಳ 27, ಜಮಖಂಡಿ 17 ಹಾಗು ಬೇರೆ ಜಿಲ್ಲೆಯ 3 ಸೋಂಕು ಪ್ರಕರಣಗಳು ವರದಿಯಾಗಿದೆ. ಎಲ್ಲರನ್ನೂ ನಿಗದಿತ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,922 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 4,029 ಸೋಂಕಿತರು ಕೋವಿಡ್‍ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. 62 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 836 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಿಂದ ಈವರೆಗೆ ಒಟ್ಟು 48,462 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 42,298 ನೆಗಟಿವ್ ಪ್ರಕರಣ, 4,922 ಪಾಸಿಟಿವ್ ಪ್ರಕರಣ ವರದಿಯಾದ್ರೆ, 210 ಸ್ಯಾಂಪಲ್‍ಗಳು ರಿಜೆಕ್ಟ್ ಆಗಿರುತ್ತವೆ. 937 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.
ಪ್ರತ್ಯೇಕವಾಗಿ 551 ಜನರು ನಿಗಾದಲ್ಲಿದ್ದಾರೆ. ಕಂಟೈನ್ಮೆಂಟ್ ಝೋನ್ 585 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾರಂಟೈನ್‍ನಲ್ಲಿದ್ದ 8,392 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.