ETV Bharat / state

ಬಾಗಲಕೋಟೆ ಜಿಲ್ಲೆಯಲ್ಲಿ ಇಂದು 121 ಹೊಸ ಪ್ರಕರಣಗಳು ದೃಢ; ಮೂರು ಸಾವು - Bagalakote new cases

ಬಾಗಲಕೋಟೆ ಜಿಲ್ಲೆಯ ಇಂದಿನ ಕೊರೊನಾ ಅಂಕಿ-ಅಂಶ ಹೀಗಿದೆ...

121 new cases found in Bagalakote
ಬಾಗಲಕೋಟೆ ಜಿಲ್ಲೆಯ ಇಂದಿನ ಕೊರೊನಾ ಅಂಕಿ-ಅಂಶ
author img

By

Published : Oct 7, 2020, 11:49 PM IST

ಬಾಗಲಕೋಟೆ: ಜಿಲ್ಲೆಯಲ್ಲಿ 150 ಜನ ಕೋವಿಡ್​ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದು ಹೊಸದಾಗಿ 121 ಕೊರೊನಾ ಪ್ರಕರಣಗಳು ಹಾಗೂ ಮೂರು ಮೃತ ಪ್ರಕರಣ ಬುಧವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 11,190 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 10,167 ಜನ ಕೋವಿಡ್​ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 21, ಬಾದಾಮಿ 18, ಹುನಗುಂದ 24, ಬೀಳಗಿ 5, ಮುಧೋಳ 29, ಜಮಖಂಡಿ 24 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್​ನಲ್ಲಿ ಪರೀಕ್ಷಿಸಲಾಗುತ್ತಿದ್ದ 1184 ಸ್ಯಾಂಪಲ್​ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 119,304 ಸ್ಯಾಂಪಲ್​ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 106,419 ನೆಗೆಟಿವ್ ಪ್ರಕರಣ, 11,190 ಪಾಸಿಟಿವ್ ಪ್ರಕರಣ ಹಾಗೂ 113 ಮೃತ ಪ್ರಕರಣ ವರದಿಯಾಗಿವೆ. ಇನ್ನು 910 ಸಕ್ರಿಯ ಪ್ರಕರಣಗಳಿದ್ದು ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್​ಗಳು ರಿಜೆಕ್ಟ್​ ಆಗಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.