ಬಾಗಲಕೋಟೆ: ಜಿಲ್ಲೆಯಲ್ಲಿಂದು ಹೊಸದಾಗಿ 123 ಕೊರೊನಾ ಪ್ರಕರಣಗಳು ದೃಢಪಟ್ಟಿವೆ.
ಇಂದು ಬಾಗಲಕೋಟೆ ತಾಲೂಕಿನಲ್ಲಿ 48, ಬಾದಾಮಿ 15, ಹುನಗುಂದ 10, ಬೀಳಗಿ 10, ಮುಧೋಳ 22, ಜಮಖಂಡಿ 16 ಹಾಗೂ ಬೇರೆ ಜಿಲ್ಲೆಯ ಒಬ್ಬರು ಮತ್ತು ಬೇರೆ ರಾಜ್ಯದ ಒಬ್ಬರಿಗೆ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಸೋಂಕಿತರ ಸಂಖ್ಯೆ 6639 ಕ್ಕೆ ಏರಿಕೆಯಾಗಿದೆ.
ಮೃತಪಟ್ಟವರ ವಿವರ: ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಈ ಮೂಲಕ ಜಿಲ್ಲೆಯಲ್ಲಿ 77 ಜನರು ಮೃತಪಟ್ಟಿದ್ದಾರೆ.
ಸೋಂಕಿನಿಂದ ಮುಕ್ತಿ ಪಡೆದವರಿಷ್ಟು:
ಇಂದು ಕೊರೊನಾ ಸೋಂಕಿನಿಂದ 79 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 5631 ಮಂದಿ ಗುಣಮುಖರಾದಂತಾಗಿದೆ. ಇನ್ನು 931 ಮಾತ್ರ ಸಕ್ರಿಯ ಪ್ರಕರಣಗಳಿವೆ.
ಕೋವಿಡ್ ಪರೀಕ್ಷೆ ವಿವರ:
ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 64,947 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 57,796 ನೆಗೆಟಿವ್ ಪ್ರಕರಣ, 6639 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇಲ್ಲಿವರೆಗೆ ಒಟ್ಟು 214 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ.
ಇತರೆ ವಿವರ:
ಕಂಟೈನ್ಮೆಂಟ್ ಝೋನ್ 585 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾರಂಟೈನ್ ನಲ್ಲಿದ್ದ 8743 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.