ಬಾಗಲಕೋಟೆ : ಜಿಲ್ಲೆಯಲ್ಲಿ ಇಂದು ಹೊಸದಾಗಿ 126 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರ ಜೊತೆಗೆ 126 ಸೋಂಕಿತರು ಗುಣಮುಖರಾಗಿದ್ದಾರೆ.
ಇಂದಿನ ಕೋವಿಡ್ ವಿವರ:
ಬಾಗಲಕೋಟೆ ತಾಲೂಕಿನಲ್ಲಿ 7, ಬಾದಾಮಿ 21, ಹುನಗುಂದ 26, ಬೀಳಗಿ 10, ಮುಧೋಳ 25, ಜಮಖಂಡಿ 37 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 7187 ಕ್ಕೆ ಏರಿಕೆಯಾಗಿದೆ.
ಇಂದಿನ ಗುಣಮುಖ:
ಜಿಲ್ಲೆಯಲ್ಲಿ 126 ಜನರು ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಇದುವರೆಗೆ ಒಟ್ಟು 6,063 ಮಂದಿ ಗುಣಮುಖರಾದಂತಾಗಿದೆ. ಇನ್ನು 1043 ಸಕ್ರಿಯ ಪ್ರಕರಣಗಳಿವೆ.
ಮೃತರ ವಿವರ:
ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 81 ಜನರು ಸಾವನ್ನಪ್ಪಿದ್ದಾರೆ.
ಕೋವಿಡ್ ಪರೀಕ್ಷೆ :
ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 71,274 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 62690 ನೆಗೆಟಿವ್ ಪ್ರಕರಣ, 7187 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಇನ್ನು ಇಲ್ಲಿವರೆಗೆ ಒಟ್ಟು 215 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 652 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾರಂಟೈನ್ ನಲ್ಲಿದ್ದ 8823 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.