ಬಾಗಲಕೋಟೆ: ಜಿಲ್ಲೆಯಲ್ಲಿ ಹೊಸದಾಗಿ 144 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಇದರಿಂದ ಸೋಂಕಿತರ ಸಂಖ್ಯೆ 2297 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಹೊಸದಾಗಿ ದೃಢಪಟ್ಟ ಸೋಂಕಿತರ ಪೈಕಿ ಬಾಗಲಕೋಟೆ ತಾಲೂಕಿನಲ್ಲಿ 18, ಬಾದಾಮಿ 24, ಹುನಗುಂದ 35, ಬೀಳಗಿ 7, ಮುಧೋಳ 31, ಜಮಖಂಡಿ 28, ಬೇರೆ ಜಿಲ್ಲೆಯ 1 ಪ್ರಕರಣಗಳಿವೆ.
ಜಿಲ್ಲೆಯಿಂದ ಕಳುಹಿಸಲಾದ ಒಟ್ಟು 350 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 686 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 30552 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 27654 ನೆಗೆಟಿವ್ ಪ್ರಕರಣ, 2297 ಪಾಸಿಟಿವ್ ಪ್ರಕರಣ ಹಾಗೂ 50 ಜನ ಮೃತಪಟ್ಟಿರುವುದು ಪ್ರಕರಣ ವರದಿಯಾಗಿರುತ್ತದೆ.
ಕೋವಿಡ್-19 ದಿಂದ ಒಟ್ಟು 1162 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನು 1085 ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 182 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 167 ಇದ್ದು, ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿದ್ದ 8297 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.