ಬಾಗಲಕೋಟೆ: ಜಿಲ್ಲೆಯಲ್ಲಿಂದು ಹೊಸದಾಗಿ 148 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಮೂವರು ಮಹಾಮಾರಿಗೆ ಬಲಿಯಾಗಿದ್ದಾರೆ. ಬಾಗಲಕೋಟೆ ತಾಲೂಕು- 26, ಬಾದಾಮಿ- 16, ಹುನಗುಂದ- 33, ಬೀಳಗಿ- 18, ಮುಧೋಳ- 28, ಜಮಖಂಡಿ- 25 ಹಾಗೂ ಬೇರೆ ಜಿಲ್ಲೆಯ ಇಬ್ಬರಿಗೆ ಸೋಂಕು ದೃಢಪಟ್ಟಿದೆ.
ಈ ಮೂಲಕ ಸೋಂಕಿತರ ಸಂಖ್ಯೆ 5,758ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಬಳಲುತ್ತಿರುವವರನ್ನ ನಿಗದಿತ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು 141 ಜನರು ಗುಣಮುಖರಾಗಿದ್ದು,. ಈವರೆಗೆ ಒಟ್ಟು 4,853 ಜನರು ಕೋವಿಡ್‍ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಸದ್ಯ 833 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಇಲ್ಲಿಯವರೆಗೆ ಒಟ್ಟು 55,360 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 48,549 ನೆಗಟಿವ್, 5,758 ಪಾಸಿಟಿವ್ ಹಾಗು 72 ಮೃತ ಪ್ರಕರಣ ವರದಿಯಾಗಿರುತ್ತದೆ. 214 ಸ್ಯಾಂಪಲ್‍ಗಳು ರಿಜೆಕ್ಟ್ ಆಗಿರುತ್ತವೆ. 744 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 309 ಜನರು ನಿಗಾದಲ್ಲಿದ್ದಾರೆ.
ಕಂಟೈನ್ಮೆಂಟ್ ಝೋನ್ 585 ಇದ್ದು, ಸಾಂಸ್ಥಿಕ ಕ್ವಾರಂಟೈನ್‍ನಲ್ಲಿದ್ದ 8,638 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.