ಬಾಗಲಕೋಟೆ : ಜಿಲ್ಲೆಯಲ್ಲಿ ಇಂದು ಹೊಸದಾಗಿ 152 ಕೊರೊನಾ ಪ್ರಕರಣಗಳು ದೃಢಪಟ್ಟಿವೆ.
ಇಂದಿನ ಕೋವಿಡ್ ಪ್ರಕರಣಗಳ ವಿವರ:
ಬಾಗಲಕೋಟೆ ತಾಲೂಕಿನಲ್ಲಿ 54, ಬಾದಾಮಿ 20, ಹುನಗುಂದ 23, ಬೀಳಗಿ 12, ಮುಧೋಳ 18, ಜಮಖಂಡಿ 24 ಹಾಗೂ ಬೇರೆ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 5,910ಕ್ಕೆ ಏರಿಕೆಯಾಗಿದೆ.
ಮೃತರ ಮಾಹಿತಿ:
ಜಿಲ್ಲೆಯಲ್ಲಿಂದು ಸೋಂಕಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇದುವರೆಗೆ 73 ಜನರು ಮೃತಪಟ್ಟಿದ್ದಾರೆ.
ಗುಣಮುಖ :
ಇಂದು ಕೊರೊನಾ ಸೋಂಕಿನಿಂದ 138 ಮಂದಿ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೆ ಒಟ್ಟು 4,991 ಮಂದಿ ಗುಣಮುಖರಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 846 ಸಕ್ರಿಯ ಪ್ರಕರಣಗಳಿವೆ.
ಕೋವಿಡ್ ಪರೀಕ್ಷೆ ವಿವರ:
ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 455 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 309 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 56,876 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 50,202 ನೆಗೆಟಿವ್ ಪ್ರಕರಣ, 5,910 ಪಾಸಿಟಿವ್ ಪ್ರಕರಣ ವರದಿಯಾಗಿರುತ್ತದೆ.
ಇಲ್ಲಿವರೆಗೆ ಒಟ್ಟು 214 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್‌ಮೆಂಟ್ ಝೋನ್ 585 ಇದ್ದು, ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‌ನಲ್ಲಿದ್ದ 8,638 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.