ಬಾಗಲಕೋಟೆ: ಜಿಲ್ಲೆಯಲ್ಲಿ ಇಂದು ಹೊಸದಾಗಿ 156 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಕೋವಿಡ್‍ನಿಂದ ಗುಣಮುಖರಾದ 44 ಜನರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಇಂದು ಬಾಗಲಕೋಟೆ ತಾಲೂಕು 27, ಬಾದಾಮಿ 19, ಹುನಗುಂದ 28, ಬೀಳಗಿ 15, ಮುಧೋಳ 25, ಜಮಖಂಡಿ 40 ಹಾಗೂ ಬೇರೆ ಜಿಲ್ಲೆಯ ಇಬ್ಬರಿಗೆ ಸೋಂಕು ತಗುಲಿದ್ದು, ಒಟ್ಟು ಜಿಲ್ಲೆಯಲ್ಲಿ ಇಲ್ಲಿಯವರೆಗೆ 4150 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಈ ಪೈಕಿ ಇಲ್ಲಿಯವರೆಗೆ ಒಟ್ಟು 2985 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 55 ಮೃತ ಪ್ರಕರಣಗಳು ವರದಿಯಾಗಿದೆ.
ಜಿಲ್ಲೆಯ 1095 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 596 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 42818 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 37282 ನೆಗೆಟವ್ ಪ್ರಕರಣ, 4150 ಪಾಸಿಟಿವ್ ಪ್ರಕರಣ ಹಾಗೂ 1111 ಮಾತ್ರ ಸಕ್ರಿಯ ಪ್ರಕರಣಗಳಿವೆ.
ಇಲ್ಲಿವರೆಗೆ ಒಟ್ಟು 192 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 223 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾರಂಟೈನ್ ನಲ್ಲಿದ್ದ 8307 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.