ಬಾಗಲಕೋಟೆ: ಜಿಲ್ಲೆಯಲ್ಲಿಂದು 159 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 4807ಕ್ಕೇರಿದೆ. ಈ ಪೈಕಿ 3949 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆಯ ಪ್ರಮಾಣ ಶೇ.82ಕ್ಕೆ ಏರಿಕೆಯಾಗಿದೆ.
ಇಂದು ಬಾಗಲಕೋಟೆ ತಾಲೂಕಿನ 25, ಬಾದಾಮಿ 19, ಹುನಗುಂದ 36, ಬೀಳಗಿ 12, ಮುಧೋಳ 31, ಜಮಖಂಡಿ 31 ಹಾಗೂ ಬೇರೆ ಜಿಲ್ಲೆಯ 5 ಜನರಲ್ಲಿ ಸೋಂಕು ದೃಢಪಟ್ಟಿದೆ. ಎಲ್ಲರನ್ನೂ ನಿಗದಿತ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯಲ್ಲಿ ಇಂದು 298 ಸೋಂಕಿತರು ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಿಂದ ಬಿಡುಗಡೆ ಹೊಂದಿದ್ದಾರೆ.
ಜಿಲ್ಲೆಯ 658 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 576 ಜನರು ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಈವರೆಗೆ ಒಟ್ಟು 47,417 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇದರಲ್ಲಿ 41,648 ನೆಗಟಿವ್ ಪ್ರಕರಣ, 4,807 ಪಾಸಿಟಿವ್ ವರದಿ ಬಂದಿದೆ. 209 ಸ್ಯಾಂಪಲ್‍ಗಳಿ ರಿಜೆಕ್ಟ್ ಆಗಿರುತ್ತವೆ. 58 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನೂ 802 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.
203 ಕಂಟೈನ್ಮೆಂಟ್ ಝೋನ್ ಗಳು ಇವೆ. ಇನ್‍ಸ್ಟಿಟ್ಯೂಶನ್ ಕ್ವಾರಂಟೈನ್‍ನಲ್ಲಿದ್ದ 8367 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕೋವಿಡ್‍ಗೆ ಎ.ಎಸ್.ಐ ಬಲಿ:
ಬೀಳಗಿ ಪೊಲೀಸ್ ಠಾಣೆಯ ಎ.ಎಸ್.ಐ ಅವರು ಅನಾರೋಗ್ಯದ ಕಾರಣ ರಜೆಯ ಮೇಲೆ ತೆರಳಿದ್ದು, ಆಗಸ್ಟ್ 19ರಂದು ಹೃದಯಾಘಾತದಿಂದ ಮೃತಪಟ್ಟಿರುತ್ತಾರೆ. ಮೃತ ವ್ಯಕ್ತಿಯ ಸ್ಯಾಂಪಲ್ ಪರೀಕ್ಷಿಸಲಾಗಿದ್ದು, ಪಾಸಿಟಿವ್ ವರದಿ ಬಂದಿದೆ. ಇವರ ಅಗಲಿಕೆಯಿಂದ ಇಲಾಖೆಗೆ ತುಂಬಲಾರದಷ್ಟು ನಷ್ಟವಾಗಿದೆ. ಕುಟುಂಬಸ್ಥರಿಗೆ ಸಿಗಬೇಕಾದ ಎಲ್ಲಾ ರೀತಿಯ ನೆರವನ್ನು ತಲುಪಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ತಿಳಿಸಿದ್ದಾರೆ.