ETV Bharat / state

ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾದಿಂದ 69 ಜನ ಗುಣಮುಖ: 161 ಹೊಸ ಪ್ರಕರಣಗಳು ದೃಢ..

ಬಾಗಲಕೋಟೆ ಜಿಲ್ಲೆಯಲ್ಲಿ ಹೊಸದಾಗಿ 161 ಕೊರೊನಾ ಪ್ರಕರಣಗಳು ಹಾಗೂ ಎರಡು ಮೃತ ಪ್ರಕರಣ ಸೋಮವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

Bagalkot
ಬಾಗಲಕೋಟೆ
author img

By

Published : Oct 12, 2020, 9:18 PM IST

ಬಾಗಲಕೋಟೆ: ಜಿಲ್ಲೆಯಲ್ಲಿ 69 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 161 ಕೊರೊನಾ ಪ್ರಕರಣಗಳು ಹಾಗೂ ಎರಡು ಮೃತ ಪ್ರಕರಣ ಸೋಮವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 11,778 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 10,902 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 36, ಬಾದಾಮಿ 29, ಹುನಗುಂದ 19, ಬೀಳಗಿ 2, ಮುಧೋಳ 41, ಜಮಖಂಡಿ 34 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 1,215 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 12,7287 ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 11,3783 ನೆಗಟಿವ್ ಪ್ರಕರಣ, 11,778 ಪಾಸಿಟಿವ್ ಪ್ರಕರಣ ಹಾಗೂ 119 ಮೃತ ಪ್ರಕರಣ ವರದಿಯಾಗಿರುತ್ತದೆ.

ಇನ್ನು 757 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿಯವರೆಗೆ ಒಟ್ಟು 413 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್​ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 438 ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.