ಬಾಗಲಕೋಟೆ : ಜಿಲ್ಲೆಯಲ್ಲಿ ಹೊಸದಾಗಿ ಇಂದು 163 ಕೊರೊನಾ ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 41, ಬಾದಾಮಿ 19, ಹುನಗುಂದ 28, ಬೀಳಗಿ 14, ಮುಧೋಳ 31, ಜಮಖಂಡಿ 25 ಹಾಗೂ ಬೇರೆ ಜಿಲ್ಲೆಯ 5 ಜನ ಇದ್ದು, ಅವರನ್ನು ನಿಗದಿತ ಕೋವಿಡ್ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಜಿಲ್ಲೆಯಲ್ಲಿ 4,648 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ.
ಇಂದು ಜಿಲ್ಲೆಯಲ್ಲಿ 301 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಜಿಲ್ಲೆಯಲ್ಲಿ 3651 ಜನರು ಗುಣಮುಖರಾದಂತಾಗಿದೆ.
ಜಿಲ್ಲೆಯ 1,010 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 601 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 46,346 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 40,384 ನೆಗೆಟಿವ್ ಪ್ರಕರಣ, 4648 ಪಾಸಿಟಿವ್ ಪ್ರಕರಣ ಹಾಗೂ 58 ಜನ ಮೃತ ಪ್ರಕರಣ ವರದಿಯಾಗಿರುತ್ತದೆ.
ಇನ್ನು 941 ಮಾತ್ರ ಸಕ್ರಿಯ ಪ್ರಕರಣಗಳಿವೆ. ಇಲ್ಲಿವರೆಗೆ ಒಟ್ಟು 209 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್‌ಮೆಂಟ್ ಝೋನ್ 203 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾರಂಟೈನ್ ನಲ್ಲಿದ್ದ 8,342 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.