ಬಾಗಲಕೋಟೆ: ಜಿಲ್ಲೆಯಲ್ಲಿ 87 ಜನ ಕೋವಿಡ್‍ನಿಂದ ಗುಣಮುಖರಾಗಿದ್ದು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 166 ಕೊರೊನಾ ಪ್ರಕರಣಗಳು ಬುಧವಾರ ದೃಢಪಟ್ಟಿವೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 6,516 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 5,552 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 46, ಬಾದಾಮಿ 24, ಹುನಗುಂದ 23, ಬೀಳಗಿ 12, ಮುಧೋಳ 30, ಜಮಖಂಡಿ 29 ಹಾಗೂ ಬೇರೆ ಜಿಲ್ಲೆಯ ಇಬ್ಬರಿಗೆ ಸೋಂಕು ದೃಢಪಟ್ಟಿದ್ದು ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 310 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 204 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 64,021 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 56,886 ನೆಗಟಿವ್ ಪ್ರಕರಣ, 6,516 ಪಾಸಿಟಿವ್ ಪ್ರಕರಣ ಹಾಗೂ 76 ಮೃತ ಪ್ರಕರಣ ವರದಿಯಾಗಿರುತ್ತದೆ.
ಇನ್ನು 888 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 214 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 585 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾಂರಂಟೈನ್‍ನಲ್ಲಿದ್ದ 8,743 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.