ETV Bharat / state

ಬಾಗಲಕೋಟೆ: 168 ಕೊರೊನಾ ಕೇಸ್ ಪತ್ತೆ... 138 ಜನ ಗುಣಮುಖ - ಬಾಗಲಕೋಟೆ ಕೊರೊನಾ ಲೆಟೆಸ್ಟ್ ನ್ಯೂಸ್‌

ಬಾಗಲಕೋಟೆಯಲ್ಲಿ ಇಂದು ಹೊಸದಾಗಿ 168 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇದರ ಜೊತೆಗೆ ಸುಮಾರು 138 ಜನರು ಗುಣಮುಖರಾಗಿದ್ದಾರೆ.

Bagalkote
Bagalkote
author img

By

Published : Aug 15, 2020, 11:07 PM IST

ಬಾಗಲಕೋಟೆ: ಜಿಲ್ಲೆಯಲ್ಲಿ ಇಂದು ಹೊಸದಾಗಿ 168 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಕೋವಿಡ್‍ನಿಂದ ಗುಣಮುಖರಾದ 138 ಜನರನ್ನು ನಿಗದಿತ ಆಸ್ಪತ್ರೆ ಮತ್ತು ಕೋವಿಡ್ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಬಾಗಲಕೋಟೆ ತಾಲೂಕಿನಲ್ಲಿ 37, ಬಾದಾಮಿ 36, ಹುನಗುಂದ 29, ಬೀಳಗಿ 22, ಮುಧೋಳ 25, ಜಮಖಂಡಿ 19 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 3994 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ ಒಟ್ಟು 2941 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 1642 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 596 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 42,439 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 36,516 ನೆಗೆಟಿವ್ ಪ್ರಕರಣ, 3994 ಪಾಸಿಟಿವ್ ಪ್ರಕರಣ ಹಾಗೂ 55 ಜನ ಮೃತಪಟ್ಟ ಪ್ರಕರಣಗಳು ವರದಿಯಾಗಿವೆ. ಇನ್ನು 999 ಮಾತ್ರ ಸಕ್ರಿಯ ಪ್ರಕರಣಗಳಿವೆ.

ಇಲ್ಲಿವರೆಗೆ ಒಟ್ಟು 192 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 223 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾರಂಟೈನ್‍ನಲ್ಲಿದ್ದ 8307 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.