ಬಾಗಲಕೋಟೆ: ಜಿಲ್ಲೆಯಲ್ಲಿ 143 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದಾರೆ. ಹೊಸದಾಗಿ 180 ಕೊರೊನಾ ಪ್ರಕರಣಗಳು ಇಂದು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 7061 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 5937 ಜನ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 81, ಬಾದಾಮಿ 13, ಹುನಗುಂದ 26, ಬೀಳಗಿ 14, ಮುಧೋಳ 13, ಜಮಖಂಡಿ 33 ಜನರಲ್ಲಿ ಸೋಂಕು ತಗುಲಿದೆ. ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 1017 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 124 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 70260 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 61872 ನೆಗಟಿವ್ ಪ್ರಕರಣ, 7061 ಪಾಸಿಟಿವ್ ಪ್ರಕರಣ ಹಾಗೂ 80 ಜನ ಮೃತ ಪ್ರಕರಣದ ವರದಿಯಾಗಿದೆ.
ಇನ್ನು 1044 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 215 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 652 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾಂರಂಟೈನ್‍ನಲ್ಲಿದ್ದ 8823 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.