ETV Bharat / state

ಅಪಘಾತದಿಂದ ಮೃತರಾದ ಕುಟುಂಬಕ್ಕೆ 2 ಲಕ್ಷ ಧನಸಹಾಯ : ಶಿವಾನಂದ ಪಾಟೀಲ್​ ಭರವಸೆ

ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ತೆರಳಿ ವಾಪಸ್ ಹೊರಟಿದ್ದ ವೇಳೆ ಟಾಟಾ ಏಸ್​ ವಾಹನ ಪಲ್ಟಿಯಾಗಿ ಐವರು ಸಾವನ್ನಪ್ಪಿದ್ದರು. ಮೃತರ ಕುಟುಂಬವನ್ನು ಭೇಟಿಯಾದ ಸಚಿವರು​, ಕುಟುಂಬದವರಿಗೆ ಸಾಂತ್ವನ ಹೇಳಿ ತಲಾ 2 ಲಕ್ಷ ರೂ. ಸಹಾಯಧನ ನೀಡುವುದಾಗಿ ಹೇಳಿದರು.

ಶಿವಾನಂದ ಪಾಟೀಲ್​
author img

By

Published : May 20, 2019, 7:27 AM IST

ಬಾಗಲಕೋಟೆ : ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಮುದ್ದೇಬಿಹಾಳ ತಾಲೂಕಿನ ಕಂದಗನೂರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಧನಸಹಾಯ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ತೆರಳಿ ವಾಪಸ್ ಹೊರಟಿದ್ದ ವೇಳೆ ಟಾಟಾ ಏಸ್​ ವಾಹನ ಪಲ್ಟಿಯಾಗಿ ಐವರು ಸಾವನ್ನಪ್ಪಿದ್ದರು. ಮೃತರ ಕುಟುಂಬವನ್ನು ಭೇಟಿಯಾದ ಸಚಿವರು​, ಕುಟುಂಬದವರಿಗೆ ಸಾಂತ್ವನ ಹೇಳಿ ತಲಾ 2 ಲಕ್ಷ ರೂ. ಸಹಾಯಧನ ನೀಡುವುದಾಗಿ ಹೇಳಿದರು.

ಸಚಿವರಿಂದ 1 ಲಕ್ಷ ರೂ. ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 1 ಲಕ್ಷ ರೂ. ಸೇರಿ ಪ್ರತಿ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರಧನ ನೀಡಲಾಗುವುದು ಎಂದು ತಿಳಿಸಿದರು.

ಅಪಘಾತದಲ್ಲಿ ಗಾಯಗೊಂಡ 27 ಜನರಿಗೆ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದು, ತೀವ್ರಗಾಯಗೊಂಡ ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ. ಇನ್ನು ಗಾಯಗೊಂಡವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಶಿವಾನಂದ ಪಾಟೀಲ್​ ತಿಳಿಸಿದರು.

sample description
ETV Bharat Logo

Copyright © 2024 Ushodaya Enterprises Pvt. Ltd., All Rights Reserved.