ಬಾಗಲಕೋಟೆ/ಕೊಪ್ಪಳ: ಜಿಲ್ಲೆಯಲ್ಲಿಂದು 50 ಮಂದಿ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದು, ಇದೇ ವೇಳೆ, ಹೊಸದಾಗಿ 20 ಕೊರೊನಾ ಪ್ರಕರಣಗಳು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಕಾಪ್ಟನ್ ಡಾ.ಕೆ.ರಾಜೇಂದ್ರ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 13,082 ಪ್ರಕರಣಗಳು ದೃಢವಾಗಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 12,746 ಮಂದಿ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 6, ಬಾದಾಮಿ 2, ಬೀಳಗಿ 1, ಹುನಗುಂದ 5, ಮುಧೋಳ 3, ಜಮಖಂಡಿಯ ಮೂವರಲ್ಲಿ ಕೊರೊನಾ ಕಂಡು ಬಂದಿದೆ.
ಇನ್ನು ಸೋಂಕಿತರೆಲ್ಲರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 1,307 ಸ್ಯಾಂಪಲ್‍ಗಳ ವರದಿ ಬಾಕಿ ಉಳಿದಿದೆ. ಇದಲ್ಲದೆ ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 1,51,936 ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 1,37,036 ನೆಗೆಟಿವ್ ಪ್ರಕರಣ ಹಾಗೂ 131 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು ಜಿಲ್ಲೆಯಲ್ಲಿ 205 ಸಕ್ರಿಯ ಪ್ರಕರಣಗಳಿವೆ ಎಂದಿದ್ದಾರೆ.
ಇತ್ತ ಕೊಪ್ಪಳದಲ್ಲಿ ಇಂದು 09 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 13,325ಕ್ಕೆ ಏರಿಕೆಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಗಂಗಾವತಿಯಲ್ಲಿ 03, ಕೊಪ್ಪಳದಲ್ಲಿ-03 ಹಾಗೂ ಯಲಬುರ್ಗಾದಲ್ಲಿ 03 ಪ್ರಕರಣ ಸೇರಿ ಇಂದು ಒಟ್ಟು 09 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 280 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇಂದು 46 ಮಂದಿ ಕೋವಿಡ್‍ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 12,706 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 311 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.