ETV Bharat / state

ಬಾಗಲಕೋಟೆ: ಹೊಸದಾಗಿ 206 ಕೋವಿಡ್​ ದೃಢ... ಮೂವರು ಸಾವು - Corona Latest News

ಜಿಲ್ಲೆಯಲ್ಲಿ ಇಂದೂ ಸಹ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಹೊಸದಾಗಿ 206 ಪ್ರಕರಣಗಳು ದಾಖಲಾಗಿವೆ. ಅಲ್ಲದೆ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ.

206 New corona cases reported in Baglkot and three died
ಬಾಗಲಕೋಟೆಯಲ್ಲಿಂದು ಹೊಸದಾಗಿ 206 ಕೋವಿಡ್​ ಪ್ರಕರಣ ದೃಢ...ಮೂವರು ಸಾವು
author img

By

Published : Sep 18, 2020, 8:14 PM IST

ಬಾಗಲಕೋಟೆ: ಜಿಲ್ಲೆಯಲ್ಲಿಂದು ಹೊಸ 206 ಕೊರೊನಾ ಪ್ರಕರಣಗಳು ದೃಢವಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಈ ನಡುವೆ ಜಿಲ್ಲೆಯಲ್ಲಿ 112 ಮಂದಿ ಗುಣಮುಖರಾಗಿ ಕೋವಿಡ್ ಸೆಂಟರ್​​​​​ನಿಂದ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 8,987 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಒಟ್ಟು 7,731 ಮಂದಿ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 61, ಬಾದಾಮಿ 34, ಹುನಗುಂದ 41, ಬೀಳಗಿ 17, ಮುಧೋಳ 25, ಜಮಖಂಡಿ 28 ಜನರಿಗೆ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 86,590 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 74,183 ನೆಗಟಿವ್ ಪ್ರಕರಣ, 8,781 ಪಾಸಿಟಿವ್ ಪ್ರಕರಣ ವರದಿಯಾಗಿರುತ್ತದೆ. ಇನ್ನು 1,160 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 409 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್​​​​ ಆಗಿದ್ದು, ಕಂಟೇನ್ಮೆಂಟ್ ಝೋನ್ 665 ಇರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.