ETV Bharat / state

ಬಾಗಲಕೋಟೆ ಜಿಲ್ಲೆಯಲ್ಲಿ 26 ಹೊಸ ಕೊರೊನಾ ಪ್ರಕರಣಗಳು ದೃಢ

ಬಾಗಲಕೋಟೆ ಜಿಲ್ಲೆಯಲ್ಲಿ ಹೊಸದಾಗಿ 26 ಕೊರೊನಾ ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ ತಿಳಿಸಿದ್ದಾರೆ.

Bagalkot
ಬಾಗಲಕೋಟೆ ಜಿಲ್ಲೆಯಲ್ಲಿ 26 ಹೊಸ ಕೊರೊನಾ ಪ್ರಕರಣಗಳು ದೃಢ
author img

By

Published : Oct 29, 2020, 8:10 AM IST

ಬಾಗಲಕೋಟೆ: ಜಿಲ್ಲೆಯಲ್ಲಿ 46 ಜನ ಕೋವಿಡ್‍ನಿಂದ ಗುಣಮುಖರಾಗಿದ್ದು, ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 26 ಕೊರೊನಾ ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13,043 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 12,647 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ-6, ಬಾದಾಮಿ-3, ಬೀಳಗಿ-2, ಜಮಖಂಡಿ-4, ಹುನಗುಂದ-6, ಮುಧೋಳ-5 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಕೋವಿಡ್ ಲ್ಯಾಬ್​ನಿಂದ 1,307 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1,49,655 ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, 1,34,894 ನೆಗಟಿವ್ ಹಾಗೂ 131 ಮೃತ ಪ್ರಕರಣಗಳು ವರದಿಯಾಗಿವೆ. 265 ಮಾತ್ರ ಸಕ್ರಿಯ ಪ್ರಕರಣಗಳಿವೆ. 162 ಕಂಟೈನ್ಮೆಂಟ್ ಝೋನ್ ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.