ETV Bharat / state

ಬಾಗಲಕೋಟೆಯಲ್ಲಿ ಇಂದು 3 ಕೊರೊನಾ ದೃಢ​: ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆ

author img

By

Published : Apr 24, 2020, 10:48 PM IST

ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಮತ್ತೆ ಮೂವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಡಾ. ಕೆ.ರಾಜೇಂದ್ರ ಮಾಹಿತಿ ನೀಡಿದ್ದಾರೆ.

ಬಾಗಲಕೋಟೆಯಲ್ಲಿ 3 ಕೊರೊನಾ ಪಾಸಿಟಿವ್​
ಬಾಗಲಕೋಟೆಯಲ್ಲಿ 3 ಕೊರೊನಾ ಪಾಸಿಟಿವ್​

ಬಾಗಲಕೋಟೆ: ಜಿಲ್ಲೆಯಲ್ಲಿ ಇಂದು ಮತ್ತೆ ಮೂವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯ ಮುಧೋಳದಲ್ಲಿ 2 ಮತ್ತು ಜಮಖಂಡಿಯಲ್ಲಿ ಒಂದು ಕೊರೊನಾ ಸೋಂಕು ತಗಲಿರುವ ಪ್ರಕರಣ ದೃಢಪಟ್ಟಿವೆ. ಮುಧೋಳದ 28 ವರ್ಷದ ಪಿ-455 ಪುರುಷ ಮತ್ತು ಜಮಖಂಡಿಯ 46 ವರ್ಷದ ಪಿ-456 ಪುರುಷ, 14 ವರ್ಷದ ಪಿ-468 ಬಾಲಕನಲ್ಲಿ ಸೋಂಕು ದೃಢಪಟ್ಟಿದೆ. ಪಿ-455 ವ್ಯಕ್ತಿ ಪಿ-380 ವ್ಯಕ್ತಿಯ ಸಂಪರ್ಕ ಹೊಂದಿದ್ದ. ಪಿ-456 ವ್ಯಕ್ತಿಯು ನೆಗಡಿ, ಕೆಮ್ಮು, ಜ್ವರದ ಲಕ್ಷಣದಿಂದ ಆಸ್ಪತ್ರೆಗೆ ದಾಖಲಾಗಿದ್ದ. ಈ ಹಿನ್ನೆಲೆ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ. ಪಿ-468 ಬಾಲಕ ಪಿ-380 ವ್ಯಕ್ತಿಯ ಸಂಪರ್ಕ ಹೊಂದಿರುವುದಾಗಿ ಡಾ. ಕೆ.ರಾಜೇಂದ್ರ ಮಾಹಿತಿ ನೀಡಿದ್ದಾರೆ.

ಕಳೆದ ನಾಲ್ಕು ದಿನಗಳಲ್ಲಿ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳ ವರದಿಯಾಗಿರಲಿಲ್ಲ. ಇಂದು ಮತ್ತೆ 3 ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದ್ದು, 43 ಸ್ಯಾಂಪಲ್‍ಗಳ ವರದಿ ನೆಗೆಟಿವ್ ಬಂದಿದೆ. ಕಳೆದ ದಿನಗಳ 31 ಬಾಕಿ ಹಾಗೂ ಹೊಸ 30 ಸ್ಯಾಂಪಲ್‍ಗಳು ಸೇರಿ ಒಟ್ಟು 61 ಸ್ಯಾಂಪಲ್‍ಗಳ ವರದಿ ಬರಬೇಕಾಗಿದೆ. ಇಲ್ಲಿವರೆಗೆ ಒಟ್ಟು 1,613 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 1,523 ನೆಗೆಟಿವ್ ಪ್ರಕರಣ, 23 ಪಾಸಿಟಿವ್ ಪ್ರಕರಣ ವರದಿಯಾಗಿವೆ. ಓರ್ವ ಕೊರೊನಾ ಸೋಂಕಿತ ಮೃತಪಟ್ಟಿದ್ದಾರೆ. 6 ಸ್ಯಾಂಪಲ್‍ಗಳು ರಿಜೆಕ್ಟ್​ ಆಗಿವೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 1,546 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಪಿ-161 ಮತ್ತು ಪಿ-162 ವ್ಯಕ್ತಿಗಳು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಈಗಾಗಲೇ ಬಿಡುಗಡೆ ಮಾಡಲಾಗಿದೆ. 28 ದಿನಗಳ ಕಾಲ ಹೋಮ್ ಕ್ವಾರಂಟೈನ್‍ನಿಂದ ಒಟ್ಟು 156 ವ್ಯಕ್ತಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.