ETV Bharat / state

ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಕಾರ್ಯಾಗಾರ

ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು 3 ದಿನಗಳ ಕಾಲ ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

author img

By

Published : Nov 13, 2019, 9:18 AM IST

ಜಿಲ್ಲಾ ಮೇಲುಸ್ತುವಾರಿ ಸಮಿತಿ

ಬಾಗಲಕೋಟೆ: ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು 3 ದಿನಗಳ ಕಾಲ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ. ರಾಜೇಂದ್ರ, ಯುಪಿಎಸ್​ಸಿ, ಕೆಪಿಎಸ್​ಸಿ ಹಾಗೂ ಬ್ಯಾಂಕಿಂಗ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ತಿಳುವಳಿಕೆ ಹೆಚ್ಚಿಸಲು ಮತ್ತು ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ವಿದ್ಯಾರ್ಥಿಗಳಿಗೆ ಮುಂದೆ ಆಯ್ಕೆ ಮಾಡಿಕೊಳ್ಳಬಹುದಾದ ಕೋರ್ಸ್​, ಲಭ್ಯವಿರುವ ಅವಕಾಶಗಳು, ವಿವಿಧ ಮಾದರಿಯ ಅಧ್ಯಯನಗಳ ಬಗ್ಗೆ ಮಾರ್ಗದರ್ಶನ ನೀಡುವುದು ಅಗತ್ಯವಾಗಿದೆ. ವಿದ್ಯಾರ್ಥಿಗಳು ಕೋರ್ಸ್​ ಮುಗಿಸಿದ ನಂತರ ತೊಡಗಿಸಿಕೊಳ್ಳಬಹುದಾದ ಉದ್ಯೋಗಾವಕಾಶಗಳು, ವಿವಿಧ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದತೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಕೆ, ಹಾಜರಾಗುವುದು ಹಾಗೂ ಸಂದರ್ಶನ ಎದುರಿಸುವ ಬಗ್ಗೆ ವಿದ್ಯಾರ್ಥಿಗಳಲ್ಲಿ ಮಾನಸಿಕ ಸ್ಥೈರ್ಯ ತುಂಬುವ ಕೆಲಸವಾಗಬೇಕು. ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೇಲುಸ್ತುವಾರಿ ಸಮಿತಿ ರಚಿಸಲಾಗಿದ್ದು, ಅಧಿಕಾರಿಗಳು ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದರು.

ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡುವ ಸಲುವಾಗಿ ವೃತ್ತಿಪರ ಹಾಗೂ ನುರಿತ ವಿಷಯ ತಜ್ಞರನ್ನು ಹಾಗೂ ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಅವರಿಂದ ವಿದ್ಯಾರ್ಥಿಗಳಿಗೆ ತರಬೇತಿ ಕೊಡಿಸಲು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ, ಜಿ.ಪಂ ಸಿಇಓ ಗಂಗೂಬಾಯಿ ಮಾನರ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಲರಾಮ ಲಮಾಣಿ ಉಪಸ್ಥಿತರಿದ್ದರು.

Intro:AnchorBody:ವಸತಿ ನಿಲಯಗಳಲ್ಲಿ 3 ದಿನ ಜಾಗೃತಿ ಕಾರ್ಯಕ್ರಮ : ಡಿಸಿ ರಾಜೇಂದ್ರ
ಬಾಗಲಕೋಟೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ
ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಐ.ಎ.ಎಸ್, ಐ.ಪಿ.ಎಸ್,
ಕೆ.ಎ.ಎಸ್, ಬ್ಯಾಂಕಿಂಗ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ತಿಳುವಳಿಕೆ ಹೆಚ್ಚಿಸಲು ಮತ್ತು
ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ 3 ದಿನಗಳ ಕಾಲ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ
ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾರ್ಗದರ್ಶನ
ನೀಡುವ ಕುರಿತು ಜಿಲ್ಲಾ ಮಟ್ಟದ ಮೇಲುಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ
ಅವರು ವಿದ್ಯಾರ್ಥಿಗಳಿಗೆ ಮುಂದೆ ಆಯ್ಕೆ ಮಾಡಿಕೊಳ್ಳಬಹುದಾದ ಕೋರ್ಸ ಲಭ್ಯವಿರುವ
ಅವಕಾಶಗಳು, ವಿವಿಧ ಮಾದರಿಯ ಅಧ್ಯಯನಗಳ ಬಗ್ಗೆ ಮಾರ್ಗದರ್ಶನ ನೀಡುವುದು
ಅಗತ್ಯವಾಗಿದೆ. ವಿದ್ಯಾರ್ಥಿಗಳು ಕೋರ್ಸ ಮುಗಿಸಿದ ನಂತರ ತೊಡಗಿಸಿಕೊಳ್ಳಬಹುದಾದ
ಉದ್ಯೋಗಾವಕಾಶಗಳು, ವಿವಿಧ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದತೆ ಮಾಡಿಕೊಳ್ಳುವ ನಿಟ್ಟಿನಲ್ಲಿ
ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡುವ ಸಲುವಾಗಿ ವೃತ್ತಿಪರ ಹಾಗೂ
ನುರಿತ ವಿಷಯ ತಜ್ಞರು, ಪ್ರತಿಷ್ಟಿತ ಕಂಪನಿಗಳ ಸಿಇಓ, ಸರ್ಕಾರಿ ಅಧಿಕಾರಿಗಳು, ಐ.ಐ.ಎಂ, ಐಐಟಿ
ಯಂತಹ ಪ್ರತಿಷ್ಠಿತ ಕಾಲೇಜುಗಳ ಪ್ರಾದ್ಯಾಕರು, ಇಂಜಿನೀಯರ್ ಮತ್ತು ವೈದ್ಯಕೀಯ ಶಿಕ್ಷಣ ಸಂಸ್ಥೆಗಳ
ಪ್ರಾದ್ಯಾಪಕರು ಹಾಗೂ ಸಂಪನ್ಮೂಲ ವ್ಯಕ್ತಿಗಳನ್ನು ಜಿಲ್ಲಾ ಮಟ್ಟದ ಮೇಲುಸ್ತುವಾರಿ ಸಮಿತಿಯಲ್ಲಿ
ಆಯ್ಕೆ ಮಾಡಿ ಅವರಿಂದ ವಿದ್ಯಾರ್ಥಿಗಳಿಗೆ ತರಬೇತಿ ಕೊಡಿಸಲು ಅಧಿಕಾರಿಗಳಿಗೆ ತಿಳಿಸಿದರು.
ವಿದ್ಯಾರ್ಥಿಗಳಿಗೆ ಹೊರ ರಾಜ್ಯ ಹಾಗೂ ವಿದೇಶಗಳಲ್ಲಿ ಅಧ್ಯಯನ ಮಾಡಬಹುದಾದ
ವಿಷಯಗಳು ಮತ್ತು ಎದುರಿಸಬೇಕಾಗಿರುವ ಪರೀಕ್ಷೆಗಳ ಮಾಹಿತಿ, ವಿದೇಶಿ ವಿದ್ಯಾರ್ಥಿ ವೇತನ ಮತ್ತು
ಫೆಲೋಷಿಪ್‍ಗಳ ಮಾಹಿತಿ ನೀಡುವುದರ ಜೊತೆಗೆ ಇತ್ತೀಚಿನ ಟ್ರೆಂಡ್ ಹಾಗೂ
ವಿದ್ಯಾರ್ಹತೆಗನುಗುಣವಾಗಿ ಲಭ್ಯವಿರುವ ಉದ್ಯೋಗಾವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ
ಕೊಡಿಸಬೇಕು ಎಂದರು.
ಜಾಗೃತಿ ಕಾರ್ಯಕ್ರಮಗಳ ಮೂಲಕ ಐ.ಎ.ಎಸ್, ಐ.ಪಿ.ಎಸ್, ಕೆ.ಎ.ಎಸ್, ಬ್ಯಾಂಕಿನ್ ಇತ್ಯಾ
ದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ನಡೆಸಲು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಕೆ,
ಹಾಜರಾಗುವುದು ಹಾಗೂ ಸಂದರ್ಶನ ಎದುರಿಸುವ ಬಗ್ಗೆ ವಿದ್ಯಾರ್ಥಿಗಳಲ್ಲಿ ಮಾನಸಿಕ ಸ್ಥೈರ್ಯ
ತುಂಬುವ ಕೆಲಸವಾಗಬೇಕು. ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ
ಮೇಲುಸ್ತುವಾರಿ ಸಮಿತಿ ರಚಿಸಲಾಗಿದ್ದು, ಅಧಿಕಾರಿಗಳು ಯೋಜನೆಯನ್ನು ಸಮರ್ಪಕವಾಗಿ
ಅನುಷ್ಠಾನಗೊಳಿಸಬೇಕು ಎಂದರು.
ಆಯಾ ತಾಲೂಕಿನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ
ವಿದ್ಯಾರ್ಥಿ ನಿಲಯಗಳಲ್ಲಿನ ಅಂತಿಮ ಪದವಿ ಮತ್ತು ಸ್ಮಾತಕೋತ್ತರ ಪದವಿಯನ್ನು ಅಧ್ಯಯನ
ಮಾಡುತ್ತಿರುವ ಆಸಕ್ತ ವಿದ್ಯಾರ್ಥಿಗಳ ಪಟ್ಟಿಯನ್ನು ಮಾಡಿ ಭೌತಿಕ ಬೇಡಿಕೆಯ ಮಾಹಿತಿಯನ್ನು
ಆಯುಕ್ತಕರ ಕಚೇರಿಗೆ ಸಲ್ಲಿಸಲು ತಿಳಿಸಿದರು. ಅಲ್ಲದೇ ಜಿಲ್ಲೆಯಲ್ಲಿರುವ ಗ್ರಂಥಾಲಯದಲ್ಲಿ ಹಾಗೂ
ವಸತಿ ನಿಲಯಗಳಲ್ಲಿ ವಿವಿಧ ಸ್ಪರ್ಧಾತ್ಮಕ ಪುಸ್ತಕಗಳನ್ನು ಇಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ
ಗಂಗೂಬಾಯಿ ಮಾನಕರ ಸೇರಿದಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಲರಾಮ
ಲಮಾಣಿ ಉಪಸ್ಥಿತರಿದ್ದರು.
Conclusion:Etv-Bharat-Bagalkote

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.