ಬಾಗಲಕೋಟೆ: ಇಂದು ಸಹ ಜಿಲ್ಲೆಯ ಮೂವರು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸಾಜ್೯ ಆಗಿದ್ದಾರೆ.
ಢಾಣಕಶಿರೂರ ಗ್ರಾಮದ ಗರ್ಭಿಣಿ ಸೇರಿದಂತೆ ಮೂವರು ಕೊರೊನಾದಿಂದ ಗುಣಮುಖರಾಗಿದ್ದು, ಒಟ್ಟು 42 ಸೋಂಕಿತರು ಇಲ್ಲಿಯವರೆಗೆ ಗುಣಮುಖರಾಗಿ ಡಿಸಾಜ್೯ ಆಗಿದ್ದಾರೆ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಢಾಣಕಶಿರೂರ ಗ್ರಾಮದ 23 ವರ್ಷದ ಗರ್ಭಿಣಿ ಮಹಿಳೆ ಪಿ-607 ಗುಣಮುಖರಾಗಿದ್ದು, ಕಿಮ್ಸ್ ಆಸ್ಪತ್ರೆಯಿಂದ ಸಂಜೆ ಬಿಡುಗಡೆ ಆಗಿದ್ದಾರೆ.
ಅದೇ ರೀತಿ ಬಾಗಲಕೋಟೆಯ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ 23 ವರ್ಷದ ಯುವಕ ಪಿ-688, 32 ವರ್ಷದ ಪುರುಷ ಪಿ-690 ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲಾ ಸರ್ಜನ್ ಡಾ.ಪ್ರಕಾಶ ಬಿರಾದಾರ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಆಸ್ಪತ್ರೆಯಿಂದ ಪ್ರಮಾಣ ಪತ್ರ ವಿತರಣೆ ಮಾಡಿ, ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಟ್ಟರು.