ETV Bharat / state

ಬಾಗಲಕೋಟೆ ಗ್ರಾ.ಪಂ ಚುನಾವಣೆ: ಅಂತಿಮ ಕಣದಲ್ಲಿ 3,382 ಅಭ್ಯರ್ಥಿಗಳು

ಬಾಗಲಕೋಟೆ ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯತಿಗಳ ಚುನಾವಣೆಯಲ್ಲಿ ಅಂತಿಮವಾಗಿ 89 ಗ್ರಾಮ ಪಂಚಾಯತಿಗಳ 1,397 ಸ್ಥಾನಗಳಿಗೆ 3,382 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ.

bagalkote
ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ
author img

By

Published : Dec 16, 2020, 10:39 AM IST

ಬಾಗಲಕೋಟೆ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯತಿಗಳ ಚುನಾವಣೆಯಲ್ಲಿ ಅಂತಿಮವಾಗಿ 89 ಗ್ರಾಮ ಪಂಚಾಯತಿಗಳ 1,397 ಸ್ಥಾನಗಳಿಗೆ 3,382 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಕರೆಯಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ,ಜಿಲ್ಲೆಯ ಮೊದಲ ಹಂತದ 89 ಗ್ರಾಮ ಪಂಚಾಯತಿಗಳ ಒಟ್ಟು 1,592 ಸ್ಥಾನಗಳಲ್ಲಿ 41 ಸ್ಥಾನಗಳಿಗೆ ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿವೆ. 154 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, 3,382 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಜಮಖಂಡಿ ತಾಲೂಕಿನಲ್ಲಿ 1,070, ರಬಕವಿ-ಬನಹಟ್ಟಿಯಲ್ಲಿ 791, ಮುಧೋಳ 819, ಬೀಳಗಿ 702 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದರು.

ಮೊದಲ ಹಂತದ ಚುನಾವಣೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮ ಅನುಸರಿಸಲಾಗುತ್ತಿದೆ. ಚುನಾವಣಾ ಕಾರ್ಯಕ್ಕೆ ನೇಮಕವಾದ ಎಲ್ಲಾ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ. ಡಿಸೆಂಬರ್​​​ 16 ರಂದು ಜಮಖಂಡಿ ಮತ್ತು ಮುಧೋಳ, 17 ರಂದು ರಬಕವಿ-ಬನಹಟ್ಟಿಯಲ್ಲಿ ತರಬೇತಿ ನೀಡಲಾಗುತ್ತಿದೆ. ಜಿಲ್ಲೆಗೆ ಗ್ರಾ.ಪಂ ಚುನಾವಣಾ ವೀಕ್ಷಕರಾಗಿ ಶಶಿಧರ ಕುರೇರ ನೇಮಕಗೊಂಡಿದ್ದು, ಈಗಾಗಲೇ ಜಿಲ್ಲೆಗೆ ಆಗಮಿಸಿ ವೀಕ್ಷಣೆ ಮಾಡುತ್ತಿರುವುದಾಗಿ ತಿಳಿಸಿದರು.

ಓದಿ: ಬಾಗಲಕೋಟೆ: ಗ್ರಾ.ಪಂ. ಚುನಾವಣೆ ಹಿನ್ನೆಲೆ 2ನೇ ದಿನ 38 ನಾಮಪತ್ರಗಳು ಸಲ್ಲಿಕೆ

ರಾಜ್ಯದ ಕೆಲವು ಭಾಗದಲ್ಲಿ ಗ್ರಾಮ ಪಂಚಾಯತ್​ ಸದಸ್ಯ ಸ್ಥಾನಗಳನ್ನು ಹರಾಜು ಹಾಕಿರುವ ಕುರಿತು ವರದಿಯಾಗಿದ್ದು, ಜಿಲ್ಲೆಯಲ್ಲಿ ಅಂತಹ ಹರಾಜು ಪ್ರಕ್ರಿಯೆಗಳು ಕಂಡು ಬಂದಲ್ಲಿ ಹರಾಜಿನಲ್ಲಿ ಪಾಲ್ಗೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇನ್ನು ಕೆಲವು ಕಡೆಗಳಲ್ಲಿ ಚುನಾವಣೆಯಿಂದ ಹೊರಗುಳಿಯುವುದು ಹಾಗೂ ಚುನಾವಣೆ ಬಹಿಷ್ಕಾರದಂತಹ ಪ್ರಕರಣಗಳು ವರದಿಯಾಗುತ್ತಿದ್ದು, ಸಾರ್ವಜನಿಕರು ಅಂತಹ ವದಂತಿಗಳಿಗೆ ಕಿವಿಗೊಡದೇ ನ್ಯಾಯಸಮ್ಮತ ಹಾಗೂ ಪಾರದರ್ಶಕ ಮತದಾನ ಪ್ರಕ್ರಿಯೆಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಮಾತನಾಡಿ, ಜಿಲ್ಲೆಯಲ್ಲಿ 2 ಹಂತಗಳಲ್ಲಿ ನಡೆಯಲಿರುವ ಚುನಾವಣೆಗೆ ಮೊದಲನೇ ಹಂತಕ್ಕೆ 1,050 ಪೊಲೀಸ್ ಸಿಬ್ಬಂದಿ, ಎರಡನೇ ಹಂತಕ್ಕೆ 1,117 ಸಿಬ್ಬಂದಿ ನೇಮಿಸಲಾಗಿದೆ. ಜಿಲ್ಲೆಯ ಮುಖ್ಯ ರಸ್ತೆಗಳಲ್ಲಿ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೊದಲನೇ ಹಂತದಲ್ಲಿ 5, ಎರಡನೇ ಹಂತದಲ್ಲಿ 6 ಚೆಕ್‍ಪೋಸ್ಟ್​ಗಳನ್ನು ಹಾಕಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ 1,564 ರೌಡಿಶೀಟರ್ಸ್ ಹಾಗೂ ಹಳೆಯ ಚುನಾವಣೆಯಲ್ಲಿ ಭಾಗಿಯಾದ ಪ್ರಕರಣಗಳಲ್ಲಿ ದಾಖಲಾದ 366 ಆರೋಪಿತರ ಮೇಲೆ ನಿಗಾ ವಹಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 905 ಆಯುಧಗಳನ್ನು ಜಮಾ ಮಾಡಿಸಲಾಗಿದೆ. ಮೊದಲನೇ ಹಂತದಲ್ಲಿ 162 ಹಾಗೂ ಎರಡನೇ ಹಂತದಲ್ಲಿ 166 ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ವಲಬನ್ ಏರಿಯಾಗಳನ್ನು ಗುರುತಿಸಲಾಗಿದ್ದು, ಸಿಪಿಐ, ಡಿಎಸ್ಪಿಗಳ ಜಂಟಿ ತಂಡ ರಚನೆ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.