ಬಾಗಲಕೋಟೆ: ಜಿಲ್ಲೆಯಲ್ಲಿ 376 ಜನ ಕೋವಿಡ್‍ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಹೊಸದಾಗಿ 149 ಕೊರೊನಾ ಪ್ರಕರಣಗಳು ಶನಿವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,911ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 1,594 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟ ಪ್ರಕರಣಗಳಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 42, ಬಾದಾಮಿ 21, ಹುನಗುಂದ 13, ಬೀಳಗಿ 10, ಮುಧೋಳ 25, ಜಮಖಂಡಿ 34 ಹಾಗೂ ಬೇರೆ ಜಿಲ್ಲೆಯ 41 ಪ್ರಕರಣಗಳು ಕಂಡು ಬಂದಿವೆ. ಜಿಲ್ಲೆಯಿಂದ ಕಳುಹಿಸಲಾದ ಒಟ್ಟು 157 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 666 ಜನ ನಿಗಾದಲ್ಲಿದ್ದಾರೆ.
ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 34,161 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 30,789 ನೆಗೆಟಿವ್ ಪ್ರಕರಣ, 2,911 ಪಾಸಿಟಿವ್ ಪ್ರಕರಣ ಹಾಗೂ 55 ಜನ ಮೃತ ಪ್ರಕರಣ ವರದಿಯಾಗಿರುತ್ತದೆ.
ಇನ್ನು 1,266 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 187 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 182 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾರಂಟೈನ್‍ನಲ್ಲಿದ್ದ 8,237 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.