ಬಾಗಲಕೋಟೆ: ಮಹಾಮಾರಿ ಕೊರೊನಾಗೆ ಜಿಲ್ಲೆಯ ನಾಲ್ವರು ಮೃತಪಟ್ಟಿದ್ದಾರೆ ಮತ್ತು 138 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ತಿಳಿಸಿದ್ದಾರೆ.
ಬಾಗಲಕೋಟೆ ತಾಲೂಕಿನ 33, ಬಾದಾಮಿ 12, ಹುನಗುಂದ 22, ಬೀಳಗಿ 3, ಮುಧೋಳ 51, ಜಮಖಂಡಿ 16 ಹಾಗೂ ಬೇರೆ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದ್ದು ಸೋಂಕಿತರ ಸಂಖ್ಯೆ 5,060ಕ್ಕೆ ಏರಿಕೆಯಾಗಿದೆ.
122 ಮಂದಿ ಇಂದು ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 4151 ಸೋಂಕಿತರು ಕೊರೊನಾ ಗೆದ್ದು ಬಂದಿರುತ್ತಾರೆ.
ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 49,351 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 42,651 ನೆಗೆಟಿವ್ ಪ್ರಕರಣ, 5,060 ಪಾಸಿಟಿವ್ ಪ್ರಕರಣ ಹಾಗೂ 66 ಮೃತ ಪ್ರಕರಣ ವರದಿಯಾಗಿರುತ್ತದೆ. 210 ಸ್ಯಾಂಪಲ್‍ಗಳು ರಿಜೆಕ್ಟ್ ಆಗಿರುತ್ತವೆ. 1,335 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 526 ಜನ ನಿಗಾದಲ್ಲಿದ್ದಾರೆ. ಕಂಟೈನ್ಮೆಂಟ್ ಝೋನ್ 585 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾಂರಂಟೈನ್‍ನಲ್ಲಿದ್ದ 8,417 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಸದ್ಯ 848 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ನಾಲ್ವರು ಬಲಿ :
ಬಾದಾಮಿ ನಗರದ ನಿವಾಸಿ 68 ವರ್ಷದ ವೃದ್ಧ ಆಗಸ್ಟ್ 11 ರಂದು ಖಾಸಗಿ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ತೀವ್ರ ಉಸಿರಾಟದ ತೊಂದರೆಗೆ ಒಳಗಾಗಿ, ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 20 ರಂದು ಮೃತಪಟ್ಟಿರುತ್ತಾರೆ. ಇದೇ ನಗರದ ನಿವಾಸಿ 64 ವರ್ಷದ ವೃದ್ಧ ಆಗಸ್ಟ್ 13 ರಂದು ಖಾಸಗಿ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ನ್ಯೂಮೋನಿಯಾ ಮತ್ತು ತೀವ್ರ ಉಸಿರಾಟದ ತೊಂದರೆಯಿಂದ ಶನಿವಾರ ಮೃತಪಟ್ಟಿರುತ್ತಾರೆ. ಬೀಳಗಿ ಪಟ್ಟಣದ ನಿವಾಸಿ 51 ವರ್ಷದ ಮಹಿಳೆ ಆಗಸ್ಟ್ 14 ರಂದು ಖಾಸಗಿ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ನ್ಯೂಮೋನಿಯಾ ಮತ್ತು ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟಿರುತ್ತಾರೆ. ಬಾದಾಮಿಯ 77 ವರ್ಷದ ವೃದ್ಧ ಆಗಸ್ಟ್ 18 ರಂದು ಖಾಸಗಿ ಕೋವಿಡ್ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದು, ಇವರು ಸಹ ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟಿರುತ್ತಾರೆ.
ಮೃತಪಟ್ಟವರನ್ನು ಕೋವಿಡ್ ಮಾರ್ಗಸೂಚಿಗಳ ಪ್ರಕಾರ ಅಂತ್ಯ ಸಂಸ್ಕಾರ ಮಾಡಲಾಗಿದೆ. ಇವರ ಕುಟುಂಬದವರೊಡನೆ ನೇರ ಸಂಪರ್ಕ ಹೊಂದಿದವರು ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.