ETV Bharat / state

ಬಾಗಲಕೋಟೆ: ಕೋವಿಡ್‍ನಿಂದ 55 ಮಂದಿ ಗುಣಮುಖ - ಬಾಗಲಕೋಟೆ ಲೆಟೆಸ್ಟ್ ನ್ಯೂಸ್

ಕೋವಿಡ್‌ಗೆ ಚಿಕಿತ್ಸೆ ಪಡೆದು 55 ಜನ ಸಂಪೂರ್ಣವಾಗಿ ಗುಣಮುಖರಾಗಿದ್ದು, ಅವರನ್ನು ಇಂದು ಬೀಳ್ಕೊಡಲಾಯಿತು.

Bagalakote corona case
Bagalakote corona case
author img

By

Published : Jul 21, 2020, 7:55 PM IST

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಯಿಂದ 55 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದು, ಇಂದು ಮಧ್ಯಾಹ್ನ ನವನಗರದ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಸ್ಥಾಪಿಸಲಾದ ಕೋವಿಡ್ ಹೆಲ್ತ್ ಕೇರ್ ಸೆಂಟರ್‌ನಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಪ್ರಮಾಣ ಪತ್ರ ವಿತರಿಸುವ ಮೂಲಕ ಗುಣಮುಖರಾದವರನ್ನು ಬೀಳ್ಕೊಟ್ಟರು.

ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ, ಅಲ್ಪಸಂಖ್ಯಾತರ ಇಲಾಖೆಯ ಉಪನಿರ್ದೇಶಕ ಎಂ.ಎನ್.ಮೇಲಿನಮನಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಬಸವರಾಜ ಶಿರೂರ ಅವರು ಗುಣಮುಖರಾದವರಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು.

ಆಸ್ಪತ್ರೆಯ ಸಿಬ್ಬಂದಿ ವರ್ಗ ಗುಣಮುಖರಾದವರ ಕೈಗಳಿಗೆ ಸೀಲ್ ಹಾಕಿ 14 ದಿನಗಳ ಕಾಲ ಕ್ವಾರಂಟೈನ್‍ನಲ್ಲಿ ಇರುವಂತೆ ಸೂಚಿಸಿ ಕಳುಹಿಸಿಕೊಟ್ಟರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.