ಬಾಗಲಕೋಟೆ: ಜಿಲ್ಲೆಯಲ್ಲಿಂದು 150 ಜನ ಕೋವಿಡ್ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದಾರೆ.
ಹೊಸದಾಗಿ 57 ಕೊರೊನಾ ಪ್ರಕರಣಗಳು ಹಾಗೂ ಒಂದು ಮೃತ ಪ್ರಕರಣ ಶನಿವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 12,891 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 12,340 ಜನ ಕೋವಿಡ್ನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ.