ಬಾಗಲಕೋಟೆ: ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಇಂದು ಬೆಳಿಗ್ಗೆ ಇಬ್ಬರು, ಸಂಜೆ ಐದು ಜನರಲ್ಲಿ ಸೋಂಕು ಇರುವುದು ದೃಢಪಟ್ಟಿರುವ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. 263ನೇ ಸಂಖ್ಯೆಯ ಸೋಂಕಿತ ಪೇದೆಯಿಂದ 372, 373, 379, 380ನೇ ಸಂಖ್ಯೆಯ ವ್ಯಕ್ತಿಗಳಿಗೆ ಸೋಂಕು ಹರಡಿದೆ.
381ನೇ ಸೋಂಕಿತ ವ್ಯಕ್ತಿ ಜ್ವರ ಬಂದ ಹಿನ್ನೆಲೆ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಒಟ್ಟು ಏಳು ಮಂದಿಗೆ ಇಂದು ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 21ಕ್ಕೆ ಸೋಂಕಿತರ ಸಂಖ್ಯೆ ಏರಿದ್ದು, ಇದರಲ್ಲಿ ಓರ್ವ ವೃದ್ಧ ಮೃತಪಟ್ಟಿದ್ದಾರೆ. ಈಗಾಗಲೇ ಮೃತನ ಜೊತೆ ಸಂಪರ್ಕ ಹೂಂದಿದವರನ್ನು ಪತ್ತೆ ಹಚ್ಚಿ ಹೋಮ್ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಇಂದು ಒಂದೇ ದಿನಕ್ಕೆ 7 ಜನರಲ್ಲಿ ಸೋಂಕು ದೃಢಪಟ್ಟಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.