ಬಾಗಲಕೋಟೆ: ಜಿಲ್ಲೆಯಲ್ಲಿ 92 ಜನ ಕೋವಿಡ್‍ನಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಇದರ ಜೊತೆಗೆ ಇಂದು ಹೊಸದಾಗಿ 84 ಕೊರೊನಾ ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 11,069 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 10,017 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 17, ಬಾದಾಮಿ 12, ಹುನಗುಂದ 15, ಬೀಳಗಿ 3, ಮುಧೋಳ 20, ಜಮಖಂಡಿ 17 ಜನರು ಸೇರಿದಂತೆ ಒಟ್ಟು 84 ಪ್ರಕರಣಗಳು ಕಂಡು ಬಂದಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 1,143 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 1,17,254 ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 1,04,531 ನೆಗೆಟಿವ್ ಪ್ರಕರಣ, 11,069 ಪಾಸಿಟಿವ್ ಪ್ರಕರಣ ಹಾಗೂ 110 ಮೃತ ಪ್ರಕರಣಗಳು ವರದಿಯಾಗಿವೆ.
942 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿವೆ. 438 ಕಂಟೈನ್ಮೆಂಟ್ ಝೋನ್ ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.