ಬಾಗಲಕೋಟೆ: ಜಿಲ್ಲೆಯಲ್ಲಿ ಇಂದು 334 ಸೋಂಕಿತರು ಕೋವಿಡ್‍ನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಹೊಸದಾಗಿ 98 ಕೊರೊನಾ ಪ್ರಕರಣಗಳು ಹಾಗೂ ಮೂರು ಮೃತ ಪ್ರಕರಣಗಳು ಗುರುವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಕೊರೊನಾ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಈವರೆಗೂ 11,288 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ 1,050 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 21, ಬಾದಾಮಿ 13, ಹುನಗುಂದ 19, ಬೀಳಗಿ 3, ಮುಧೋಳ 23, ಜಮಖಂಡಿ 19 ಜನರಲ್ಲಿ ಸೋಂಕು ದೃಢಪಟ್ಟಿದೆ.
ಈವರೆಗೂ ಒಟ್ಟು 1,20,738 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 1,07,769 ನೆಗಟಿವ್ ಪ್ರಕರಣ, 11,288 ಪಾಜಿಟಿವ್ ಪ್ರಕರಣ ಹಾಗೂ 116 ಮೃತ ಪ್ರಕರಣಗಳು ವರದಿಯಾಗಿವೆ ಎಂದು ಜಿಲ್ಲಾಧಿಕಾರಿಗಳು ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.