ಬಾಗಲಕೋಟೆ : ಜಿಲ್ಲೆಯಲ್ಲಿಂದು ಹೊಸದಾಗಿ 98 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಇದರ ಜೊತೆಗೆ 99 ಜನರು ಗುಣಮುಖರಾಗಿದ್ದಾರೆ.
ಕೋವಿಡ್ ಪ್ರಕರಣಗಳ ಮಾಹಿತಿ:
ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 34, ಬಾದಾಮಿ 19, ಹುನಗುಂದ 15, ಬೀಳಗಿ 11, ಮುಧೋಳ 8, ಜಮಖಂಡಿ 10 ಹಾಗೂ ಬೇರೆ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ 6737 ಸೋಂಕಿತ ಪ್ರಕರಣಗಳಿವೆ.
ಮೃತರ ಮಾಹಿತಿ:
ಜಿಲ್ಲೆಯಲ್ಲಿಂದು ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದು, ಇದುವರೆಗೆ ಒಟ್ಟು 78 ಜನರು ಮೃತಪಟ್ಟಿದ್ದಾರೆ.
99 ಮಂದಿ ಗುಣಮುಖ:
ಸೋಂಕಿನಿಂದ ಇಂದು 99 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 5730 ಜನರು ಗುಣಮುಖರಾದಂತಾಗಿದೆ.ಇನ್ನು 929 ಮಾತ್ರ ಸಕ್ರಿಯ ಪ್ರಕರಣಗಳಿವೆ.
ಕೋವಿಡ್ ಪರೀಕ್ಷೆ:
ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 66,323 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 58,696 ನೆಗೆಟಿವ್ ಪ್ರಕರಣ, 6737 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ಇಲ್ಲಿವರೆಗೆ ಒಟ್ಟು 214 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 581 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾರಂಟೈನ್ ನಲ್ಲಿದ್ದ 8793 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.