ಬಾಗಲಕೋಟೆ: ಎರಡು ಗುಂಪಿನ ಯುವಕರ ಮಧ್ಯೆ ಗಲಾಟೆ ಉಂಟಾಗಿ ಇಬ್ಬರಿಗೆ ಚಾಕುವಿನಿಂದ ಇರಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದಲ್ಲಿ ನಡೆದಿದೆ. ಅರುಣ್ ಕಟ್ಟಿಮನಿ, ಲಕ್ಷಣ ಕಟ್ಟಿಮನಿ ಎಂಬುವರಿಗೆ ಗಾಯವಾಗಿದೆ. ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದ್ದು, ಮಾರುಕಟ್ಟೆ ಪ್ರದೇಶ ಸಂಪೂರ್ಣ ಬಂದ್ ಮಾಡಲಾಗಿದೆ. ಮೊದಲು ಯುವಕರ ನಡುವೆ ವಾಗ್ವಾದ ನಡೆದಿದ್ದು, ಬಳಿಕ ಅದು ಗಲಾಟೆಗೆ ತಿರುಗಿದೆ.
ಇದರಿಂದ ಆಕ್ರೋಶಗೊಂಡ ಕೆಲ ಯುವಕರು, ತಳ್ಳುಗಾಡಿಗೆ ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆ ಪಟ್ಟಣದಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಮಾರ್ಕೆಟ್ ಪ್ರದೇಶ ಸಂಪೂರ್ಣ ಬಂದ್ ಮಾಡಿರುವ ಪೊಲೀಸರು, ಜನರು ಹೊರ ಬರದಂತೆ ಸೂಚನೆ ನೀಡಿದ್ದಾರೆ.
ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಎಸ್ಪಿ ಜಯಪ್ರಕಾಶ್ ಭೇಟಿ ಪರಿಶೀಲನೆ ನಡೆಸಿದ್ದಾರೆ. 10ಕ್ಕೂ ಹೆಚ್ಚು ಬೈಕ್ಗಳು ಜಕಂ ಗೊಂಡಿವೆ.
ಇದನ್ನೂ ಓದಿ: Video- ಮಾಜಿ ಸಚಿವೆ ಮೋಟಮ್ಮ ಸಹೋದರನ ಕಾರ್ ಮೇಲೆ ಬಿತ್ತು ಮರದ ಕೊಂಬೆ