ಬಾಗಲಕೋಟೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೂರು ದಿನಗಳನ್ನು ಪೂರೈಸಿದ ರಾಜ್ಯ ಸರ್ಕಾರದ ಅಭಿವೃದ್ದಿ ಕಾರ್ಯಕ್ರಮ ಹಾಗೂ ನೆರೆ ಪ್ರವಾಹ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಕಾರ್ಯಗಳ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮಾತನಾಡಿ, ಸರ್ಕಾರ ಜಾರಿಗೆ ತರಲಾದ ಹಲವಾರು ಮಹತ್ವದ ಯೋಜನೆಗಳ ಮಾಹಿತಿಯನ್ನೊಳಗೊಂಡ ಈ ಛಾಯಾಚಿತ್ರ ಪ್ರದರ್ಶನ ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಶ್ಲಾಘನೀಯ ಕಾರ್ಯವನ್ನು ಮಾಡಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.
ಜಿ.ಪಂ ಸಿಇಓ ಗಂಗೂಬಾಯಿ ಮಾತನಾಡಿ, ಸರ್ಕಾರದ ಯೋಜನೆಗಳ ಅರಿವು ಅಗತ್ಯವಾಗಿದೆ. ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸರ್ಕಾರ ನೀಡುತ್ತಿರುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು.