ಬಾಗಲಕೋಟೆ: ನಿತ್ಯ ಕುಡಿದು ಬಂದು ಹೆಂಡತಿಯೊಡನೆ ಗಲಾಟೆ ಮಾಡುತ್ತಿದ್ದ ಮಗನಿಗೆ ಬುದ್ಧಿವಾದ ಹೇಳಿದ ತಂದೆಯನ್ನೇ ಕೊಲೆ ಮಾಡಿರುವ ಘಟನೆ ಹುನಗುಂದ ತಾಲೂಕಿನ ಚವಡಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ.
ಶಿವಪ್ಪ ಗೌಡರ (65) ಮಗನಿಂದಲೇ ಕೊಲೆಯಾದ ತಂದೆ. ರಾಜೇಂದ್ರ ಗೌಡರ ತಂದೆಯನ್ನೇ ಕೊಲೆ ಮಾಡಿದ ಪಾಪಿ ಮಗ. ರಾಜೇಂದ್ರ ನಿತ್ಯ ಕುಡಿದು ಬಂದು ಹೆಂಡತಿಯೊಡನೆ ಜಗಳ ಆಡುತ್ತಿದ್ದ. ಇದನ್ನು ಗಮನಿಸಿದ ತಂದೆ ಶಿವಪ್ಪ, ನಿತ್ಯ ಕುಡಿದು ಬಂದು ಗಲಾಟೆ ಮಾಡುವುದು ಸರಿಯಲ್ಲ ಎಂದು ಬುದ್ದಿವಾದ ಹೇಳಿದ್ದಾರೆ.
ಕುಡಿದ ಮತ್ತಿನಲ್ಲಿದ್ದ ಮಗ ಬುದ್ದಿವಾದ ಹೇಳಲು ಬಂದ ತಂದೆ ತಲೆಗೆ ರಾಡ್ನಿಂದ ಬಲವಾಗಿ ಹೊಡೆದಿದ್ದಾನೆ. ಪರಿಣಾಮ ಶಿವಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದೇ ವೇಳೆ ಪತ್ನಿ ಮೇಲೆಯೂ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಆಕೆಯನ್ನು ಕೆರೂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಕುರಿತು ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.