ಬಾಗಲಕೋಟೆ: ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ನಗರದಲ್ಲಿ ನಡೆದಿದೆ. ಈತ ಹೆಚ್ಚು ಸಾಲ ಮಾಡಿಕೊಂಡಿದ್ದು, ಸಾಲಗಾರರ ಕಿರುಕುಳ ತಾಳಲಾರದೇ ಈ ರೀತಿ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ನಗರದಲ್ಲಿರುವ ಸಿಮೆಂಟ್ ಕ್ವಾರಿಗೆ ಹಾರಿ ಅಕ್ಷಯ್ ಚಿನ್ನಾಕಾರ(26) ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಲಮಟ್ಟಿ ಜಲಾಶಯದ ಹಿನ್ನೀರು ಸಂಗ್ರಹದಲ್ಲಿ ಇರುವ ಸಿಮೆಂಟ್ ಕ್ವಾರಿಯಲ್ಲಿ ಶವ ಪತ್ತೆಯಾಗಿದೆ. ಈತ ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ. ಹತ್ತು ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ.
ಯುವಕ ಸಲೂನ್ ನಡೆಸುತ್ತಿದ್ದು, ಇದಕ್ಕಾಗಿಯೇ ಇಷ್ಟೆಲ್ಲಾ ಸಾಲ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಒಂದು ವಾರದಿಂದ ಸಾಲ ಕೊಟ್ಟವರ ಕಾಟ ತೀರಾ ಹೆಚ್ಚಾಗಿದ್ದರಿಂದ ನೊಂದು ಆತ್ಮಹತ್ಯೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಮೃತರ ಕುಟುಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಬಗ್ಗೆ ಬಾಗಲಕೋಟೆ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.