ಬಾಗಲಕೋಟೆ: ವಿಶ್ವವಿದ್ಯಾಲದಲ್ಲಿ ಇಲೆಕ್ಟ್ರಾನಿಕ್ ಡಾಕ್ಯುಮೆಂಟ್ ಜನರೇಶನ್ ಸಿಸ್ಟಮ್ (ಇಡಿಜಿಎಸ್) ತಂತ್ರಾಂಶ ಬಳಸುವ ಹೆಸರಿನಲ್ಲಿ ಪ್ರತಿ ಅಂಕಪಟ್ಟಿಗೆ 156 ರೂ.ಗಳನ್ನೂ ವಿದ್ಯಾರ್ಥಿಗಳಿಂದ ವಸೂಲಿ ಮಾಡಲು ಹೊರಟಿರುವ ಸರ್ಕಾರದ ಕ್ರಮ ಖಂಡಿಸಿ ಬಾಗಲಕೋಟೆ ನಗರದಲ್ಲಿ ಎಬಿವಿಪಿ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ಬಸವೇಶ್ವರ ಮಹಾವಿದ್ಯಾಲಯದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಾಣ ಮಾಡಿದ್ದರಿಂದ ಕೆಲಕಾಲ ಸಂಚಾರಕ್ಕೆ ಅಡೆತಡೆ ಉಂಟಾಯಿತು. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.