ಬಾಗಲಕೋಟೆ: ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಖಜಾನೆ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಧಿಕಾರಿಗಳನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ.
ಕಡತ ವಿಲೇವಾರಿ, ವೇತನ, ಅರಿಯರ್ಸ್, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಚೆಕ್ ನೀಡಲು ಖಜಾನೆ ಅಧಿಕಾರಿ ಮಂಜುನಾಥ ಲಂಚ ಕೇಳಿದ್ದರು ಎಂಬ ಆರೋಪ ಕೇಳಿಬಂದಿತ್ತು. ಜೊತೆಗೆ ಅಧಿಕಾರಿ ಮಂಜುನಾಥ ಮೇಲೆ ಸಾರ್ವಜನಿಕರಿಂದ ದೂರು ಅರ್ಜಿಗಳು ಸಹ ಬಂದಿದ್ದವು. ಹೀಗಾಗಿ ಎಸಿಬಿ ಡಿವೈಎಸ್ಪಿ ಎಂ.ವಿ.ಮಲ್ಲಾಪುರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಮಂಜುನಾಥ ಸ್ವಾಮಿ, ಕೆಲ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ.
ಈಗಾಗಲೇ ಅಧಿಕಾರಿಗಳಿಗೆ ಒಂದು ಲಕ್ಷ ರೂ. ದಾಳಿ ವೇಳೆ ಸಿಕ್ಕಿದೆ ಎನ್ನಲಾಗಿದ್ದು, ಖಜಾನೆ ಕಚೇರಿಯಲ್ಲಿ ಲಂಚ ಕೇಳುತ್ತಿರುವ ಬಗ್ಗೆ ಸಾರ್ವಜನಿರಿಂದ ದೂರು ಬಂದ ಹಿನ್ನೆಲೆ ಈ ದಾಳಿ ಮಾಡಿ ತಪಾಸಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.