ಬಾಗಲಕೋಟೆ: ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಕೊಲ್ಲಾರ ಬಳಿ ನಡೆದಿದೆ.
ಕಾರಿನಲ್ಲಿದ್ದ ಶ್ರೀಕಾಂತ್ ಮಲ್ಲಣ್ಣ ಹತ್ತೂರ (27) ಮೃತ ದುರ್ದೈವಿ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣ-ಪುಟ್ಟ ಗಾಯಗೊಂಡವರನ್ನು ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.