ETV Bharat / state

ಅಕ್ಕನ ಬಳಗದ ವತಿಯಿಂದ ಸಸಿ ನೆಡುವ ಕಾರ್ಯಕ್ಕೆ ಚಾಲನೆ - ಅಕ್ಕನ ಬಳಗ

ನಗರದ ಬಿವಿವಿ ಸಂಘದ ಕುಮಾರೇಶ್ವರ ಆಸ್ಪತ್ರೆ ಆವರಣದಲ್ಲಿ ಅಕ್ಕನ ಬಳಗದ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ಜರುಗಿತು.

Akkana balaga
Akkana balaga
author img

By

Published : Jun 13, 2020, 4:38 PM IST

ಬಾಗಲಕೋಟೆ: ಅಕ್ಕನ ಬಳಗದ ವತಿಯಿಂದ ನವನಗರದಲ್ಲಿರುವ ಬಿವಿವಿ ಸಂಘದ ಕುಮಾರೇಶ್ವರ ಆಸ್ಪತ್ರೆ ಆವರಣದಲ್ಲಿ ರಾಜೇಶ್ವರಿ ವೀರಣ್ಣ ಚರಂತಿಮಠ ನೇತೃತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜೇಶ್ವರಿ ವಿ. ಚರಂತಿಮಠ, ಪ್ರತಿಯೊಬ್ಬರು ಸಸಿ ನೆಡುವುದನ್ನು ರೂಢಿಸಿಕೊಳ್ಳಬೇಕು. ಅದರ ಜೊತೆಗೆ ಸಸಿಗಳನ್ನು ಪೋಷಣೆ ಮಾಡುವ ಜವಾಬ್ದಾರಿ ಹೊತ್ತು ಪರಿಸರ ಸಂರಕ್ಷಣೆ ಮಾಡಿದಾಗ ಮಾತ್ರ ಪ್ರತಿಯೊಬ್ಬರೂ ನೆಮ್ಮದಿಯಿಂದ ಇರಲು ಸಾಧ್ಯ ಎಂದು ಹೇಳಿದರು.

ಈ ವೇಳೆ ಅಕ್ಕನ ಬಳಗದ ಅಧ್ಯಕ್ಷೆ ನಿರ್ಮಲಾ ಹಲಕುರ್ಕಿ, ರಾಜೇಶ್ವರಿ ಮರೆಗುದ್ದಿ, ಮಹಾದೇವಿ ಅಥಣಿ, ಶಿವಲೀಲಾ ಪಟ್ಟಣಶೆಟ್ಟಿ, ಜಯಾ ಭದ್ರಶೆಟ್ಟಿ, ಸಂಗೀತಾ ರೇವಡಿಗಾರ ಸೇರಿದಂತೆ ಅಕ್ಕನ ಬಳಗದ ಸದಸ್ಯರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.