ಬಾಗಲಕೋಟೆ: ಕೋವಿಡ್-19 ಹಿನ್ನೆಲೆ ಇದೇ ಪ್ರಥಮ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಅಂಬೇಡ್ಕರ್ ಜಯಂತಿ ಸರಳ ವಾಗಿ ಆಚರಣೆ ಮಾಡಲಾಯಿತು.
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ 129ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆಸಲ್ಲಿಸಿ, ಪುಷ್ಪ ನಮನ ಅರ್ಪಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಒ ಗಂಗೂಬಾಯಿ ಮಾನಕರ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಜಗದೀಶ ಹೆಬ್ಬಳ್ಳಿ ಸೇರಿದಂತೆಇತರರು ಸಹ ಪುಷ್ಪ ಸಮರ್ಪಿಸಿದರು.
ಕಾರ್ಯಕ್ರಮದ ಪೂರ್ವದಲ್ಲಿ ಹಳೆಯ ಬಾಗಲಕೋಟೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಅವರ ಪುತ್ಥಳಿಗೆ ಶಾಸಕ ವೀರಣ್ಣ ಚರಂತಿಮಠ ಹೂ ಮಾಲಾರ್ಪಣೆ ಮಾಡಿ ನಮನ ಅರ್ಪಿಸಿದರು.