ಬಾಗಲಕೋಟೆ : ಕೊರೊನಾ ಸೋಂಕು ತಗುಲಿರುವವರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಮಯದಲ್ಲಿ ಬಿಸಿ ಬಿಸಿ ಆಹಾರ ನೀಡಿದ್ರೆ ಕೊರೊನಾದಿಂದ ಮುಕ್ತ ಪಡೆಯುವ ಸಾಧ್ಯತೆ ಹೆಚ್ಚಾಗಿರುತ್ತದೆ.
ಆದರೆ, ಇಂತಹ ಕೋವಿಡ್ ಆಸ್ಪತ್ರೆಯಲ್ಲಿ ಹಳಸಿದ ಅನ್ನ ನೀಡುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಕಳಪೆ ಆಹಾರ ನೀಡುತ್ತಿರುವ ಬಗ್ಗೆ ಈ ಹಿಂದೆ ಆರೋಪ ಕೇಳಿ ಬಂದಿತ್ತು. ಈಗ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರೊಬ್ಬರು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.
ಮಧ್ಯಾಹ್ನದ ವೇಳೆ ಹಳಸಿದ ಹಾಗೂ ಕಳಪೆ ಆಹಾರ ನೀಡುತ್ತಿದ್ದಾರೆ ಎಂದು ವಿಡಿಯೋದಲ್ಲಿ ಆರೋಪಿಸಿದ್ದಾರೆ. ಅಲ್ಲದೆ ಗುಣಮಟ್ಟದ ಆಹಾರಕ್ಕಾಗಿ ಆಗ್ರಹಿಸಿದ್ದಾರೆ.