ಬಾಗಲಕೋಟೆ: ಇಂದು ಮತ್ತೊಬ್ಬ ವ್ಯಕ್ತಿಗೆ ಕೊರೊನಾ ತಗುಲಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ.
ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನಿವಾಸಿ 33 ವರ್ಷದ ವ್ಯಕ್ತಿಗೆ ಸೋಂಕು ತಗುಲಿದ್ದು, ಈತ ಏ. 12ರಂದು ಗ್ರಾಮಕ್ಕೆ ಬಂದಿದ್ದ. ಕುಳಗೇರಿ ಕ್ರಾಸ್ನಲ್ಲಿ ಕ್ವಾರಂಟೈನ್ನಲ್ಲಿ ಇಡಲಾಗಿತ್ತು. ಬಳಿಕ ಮೇ 14ರಂದು ನಗರದಲ್ಲಿರುವ ಕೋವಿಡ್ ಆಸ್ಪತ್ರೆಗೆ ಕರೆ ತಂದು ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ.
ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಸೋಂಕಿತ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದವರ ಕುರಿತಂತೆ ವೈದ್ಯಕೀಯ ಸಿಬ್ಬಂದಿಯಿಂದ ಮಾಹಿತಿ ಕಲೆಹಾಕುತ್ತಿದ್ದಾರೆ. ರೋಗಿ ನಂ-1063ಗೆ ಪಾಸಿಟಿವ್ ಬಂದಿದ್ದು, ಟ್ರಾವೆಲ್ ಹಿಸ್ಟರಿಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ.