ETV Bharat / state

ಬಾಗಲಕೋಟೆಯಲ್ಲಿ ಬಿಜೆಪಿ ಸಭೆ.. ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ - ಬಾಗಲಕೋಟೆ

ಬಾಗಲಕೋಟೆಯಲ್ಲಿ ನಡೆದ ಬಿಜೆಪಿ ಪಕ್ಷದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದೆ.

Argument between BJP activists in Bagalkot
ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ
author img

By

Published : Jun 26, 2023, 2:30 PM IST

ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ

ಬಾಗಲಕೋಟೆ: ಬಿಜೆಪಿ ಪಕ್ಷದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮಖದಲ್ಲಿಯೇ ನಡೆದ ಗಲಾಟೆಯಿಂದಾಗಿ ಕೆಲ ಸಮಯ ಗೊಂದಲಮಯ ವಾತಾವರಣ ನಿರ್ಮಾಣವಾಯಿತು. ಸಭೆಯು ಪ್ರಾರಂಭದಲ್ಲಿ ಪ್ರಾಸ್ತಾವಿಕವಾಗಿ ಜಿಲ್ಲಾಧ್ಯಕ್ಷರಾದ ಎಸ್.ಟಿ ಪಾಟೀಲ ಮಾತನಾಡಿದರು. ಬಳಿಕ ವೇದಿಕೆ ಮುಂದೆ ಕುಳಿತುಕೊಂಡಿರುವ ರಾಜು ರೇವಣಕರ್​ ಮಾತನಾಡಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿರುವವರು ಈ ಸಭೆಯಲ್ಲಿ ಆಗಮಿಸಿ ಕುಳಿತುಕೊಂಡಿದ್ದಾರೆ. ಅವರನ್ನು ಸಭೆಯಿಂದ ಹೊರಗೆ ಹಾಕಿರಿ ಎಂದು ಹೇಳಿ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಎಲ್ಲ‌ ಕಾರ್ಯಕರ್ತರು ಸೇರಿಕೊಂಡು, ಪಕ್ಷ ವಿರೋಧಿ ಚಟುವಟಿಕೆ ಮಾಡಿರುವವರು ಹೊರಗೆ ಹೋಗಿರಿ, ಇಲ್ಲವೇ ನಾವೇ ಹೊರಗೆ ಹಾಕಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಗೋವಿಂದ ಕಾರಜೋಳ ಅವರು ಸಮಾಧಾನ ಪಡಿಸಿದರು. ಕಾರ್ಯಕರ್ತರು ಮೌನ ವಹಿಸದೇ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಿದ್ದರಾಮನಹುಂಡಿಯಲ್ಲಿ ಪ್ರಚಾರದ ವೇಳೆ ಬಿಜೆಪಿ - ಕಾಂಗ್ರೆಸ್​ ಕಾರ್ಯಕರ್ತರ ಮಧ್ಯೆ ಗಲಾಟೆ

ನಂತರ ಮಾಜಿ ಶಾಸಕರಾದ ವೀರಣ್ಣ ಚರಂತಿಮಠ ಮಾತನಾಡಿ, ವೈದ್ಯಕೀಯ ಪ್ರಕೋಸ್ಟ ಸಂಚಾಲಕರಾದ ಡಾ.ಶೇಖರ ಮಾನೆ, ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ. ನಿನ್ನೆ ಶಿವಾಜಿ ಪುತ್ಥಳಿ ಸ್ಥಾಪನೆ ಮಾಡುವ ವಿಷಯವಾಗಿಯೂ ಸಹ ಮಾಡಿದ್ದಾರೆ. ಇಂತಹ ವ್ಯಕ್ತಿಯನ್ನು ಸಭೆಯಿಂದ ಹೊರಗೆ ಹಾಕಿರಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಡಾ.ಮಾನೆ ವೇದಿಕೆಗೆ ಆಗಮಿಸಿ ಮುಖಂಡರಿಗೆ ಸಮಜಾಯಿಷಿ ನೀಡಲು ಮುಂದಾದಾಗ ಕಾರ್ಯಕರ್ತರು ಹಾಗೂ ಪೊಲೀಸರು ಆಗಮಿಸಿ ಡಾ.ಮಾನೆ ಅವರನ್ನು ಹೊರಗೆ ಕರೆದುಕೊಂಡು ಹೋದರು. ಇವರ ಜೊತೆಗೆ ಅವರ ಬೆಂಬಲಿಗರನ್ನು ಸಹ ಕರೆದುಕೊಂಡು ಹೋದರು. ನಂತರ ಸಭೆಯನ್ನು ಮುಂದುವರೆಸಲಾಯಿತು.

ವೇದಿಕೆಯ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ ಗದ್ದಿಗೌಡರ, ಮಾಜಿ ಸಚಿವೆ ಶಶಿಕಲಾ ಜೋಲ್ಲೆ, ಮುರಗೇಶ್​ ನಿರಾಣಿ, ಎ.ಎಸ್ ನಡಹಳ್ಳಿ ಪಾಟೀಲ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ, ಶಾಸಕ ಸಿದ್ದು ಸವದಿ ಸೇರಿದಂತೆ ಇತರ ಮುಖಂಡರು ಉಪಸ್ಥಿತರಿದ್ದರು‌.

ಇದನ್ನೂ ಓದಿ: ಹಾವೇರಿ ಶಾಸಕ ಓಲೇಕಾರ್ ಬಗ್ಗೆ ಪರ ವಿರೋಧ ಗೊಂದಲದ ವಾತಾವರಣ.. ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ

ಬಿಜೆಪಿ ನಾಯಕರು ನಾಲ್ಕು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಎಲ್ಲ ಕಡೆ ನಾಯಕರು ವಿಧಾನಸಭೆ ಚುನಾವಣೆಯಲ್ಲಿ ಆದ ಪಕ್ಷದ ಸೋಲಿನ ಬಗ್ಗೆ ಕಾರ್ಯಕರ್ತರೊಂದಿಗೆ ಸಮಾಲೋಚನೆ ಮಾಡುತ್ತಿದ್ದಾರೆ. ಮೊನ್ನೆ ಬೆಂಗಳೂರಿನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರು ವಾಗ್ವಾದ ನಡೆಸಿದ್ದರು. ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮಧ್ಯಪ್ರವೇಶಿಸಿ, ಕಾರ್ಯಕರ್ತರನ್ನು ಸಮಾಧಾನಪಡಿಸಿದ್ದರು.

ಇದನ್ನೂ ಓದಿ: ರಾಮನಗರ: ಟೋಲ್​ ಸಿಬ್ಬಂದಿ-ಶಾಸಕರ ನಡುವೆ ವಾಗ್ವಾದ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.