ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಬಾದಾಮಿ ಬನಶಂಕರಿ ದೇವಾಲಯ ಜಾತ್ರೆಯು ಶುಕ್ರವಾರ ಹುಣ್ಣಿಮೆಯ ದಿನದಂದು ಅದ್ಧೂರಿಯಾಗಿ ನಡೆಯಲಿದೆ.
ಒಂದು ತಿಂಗಳ ಕಾಲ ಜಾತ್ರೆ ನಡೆಯಲಿದ್ದು, ಲಕ್ಷಾಂತರ ಜನರು ಸೇರಲಿದ್ದಾರೆ. ಈ ಹಿನ್ನೆಲೆ ನಾಳೆಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೂಡ ಕೈಗೊಳ್ಳಲಾಗಿದೆ. ಚನ್ನಮ್ಮ ಪಡೆಯಡಿ 25 ಜನ ಮಹಿಳಾ ಸಿಬ್ಬಂದಿ ನೇಮಕ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಸಾರ ಅವರ ನೇತೃತ್ವದಲ್ಲಿ ನೂತನ ಮಹಿಳಾ ಪಡೆ ನೇಮಕ ಮಾಡಲಾಗಿದೆ. ಜೊತೆಗೆ ಸರಸ್ವತಿ ಹಳ್ಳ ಮತ್ತ ಪುಷ್ಕರಣಿ ಬಳಿಯೂ ಸಹ ಪೊಲೀಸರನ್ನು ನಿಯೋಜಿಸಲಾಗಿದೆ. ಭಕ್ತಾಧಿಗಳು ಜಾಗರೂಕರಾಗಿರಬೇಕೆಂದು ತಿಳಿಸಿದ್ದಾರೆ.