ಬಾಗಲಕೋಟೆ : ಹಿಂದೂ ಜಾಗರಣ ವೇದಿಕೆಯ ಒತ್ತಡ ಮತ್ತು ಪ್ರತಿಭಟನೆಗೆ ಮಣಿದ ಸರ್ಕಾರ ಬಾದಾಮಿ ಸಿಪಿಐ ಕರಿಯಪ್ಪ ಬನ್ನೆ ಅವರನ್ನು ಅಮಾನತು ಮಾಡಿ ಆದೇಶಿಸಿದೆ.
ಇಲ್ಲಿನ ಕೆರೂರ ಪಟ್ಟಣದ ಗಣೇಶ ನಿಮಜ್ಜನ ಮೆರವಣಿಗೆಯಲ್ಲಿ ನಡೆದಿದ್ದ ಗಲಾಟೆ ಹಿನ್ನೆಲೆ, ಬಾದಾಮಿ ಸಿಪಿಐ ಕರಿಯಪ್ಪ ಬನ್ನೆ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ್ ಮಾಹಿತಿ ನೀಡಿದ್ದಾರೆ.
ಪೊಲೀಸರ ದೌರ್ಜನ್ಯವನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ ಕಾರಂತ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿತ್ತು. ಇದರ ಬೆನ್ನಲ್ಲೇ ಬಾದಾಮಿ ಸಿಪಿಐ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಪೊಲೀಸರ ವಿರುದ್ಧ ಹಲ್ಲೆ ನಡೆಸಿದ ಆರೋಪದಡಿ ಬಂಧಿಸಲಾಗಿದ್ದ 12 ಜನರನ್ನೂ ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ :ಉಳ್ಳಾಲ: ನಾಪತ್ತೆಯಾಗಿದ್ದವ ಸಮುದ್ರದಲ್ಲಿ ಶವವಾಗಿ ಪತ್ತೆ, ಕೊಲೆ ಆರೋಪ