ETV Bharat / state

ಬಾಗಲಕೋಟೆ ಉದ್ಯೋಗ ಮೇಳ: 4,835 ಆಕಾಂಕ್ಷಿಗಳ ನೋಂದಣಿ - Bagalakot job fair

ವಿದ್ಯಾಗಿರಿಯ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿರುವ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ಫೆಬ್ರವರಿ 27 ಮತ್ತು 28 ರಂದು ಎರಡು ದಿನಗಳ ಕಾಲ ಜರುಗಲಿರುವ ಉದ್ಯೋಗ ಮೇಳಕ್ಕೆ ಇಲ್ಲಿವರೆಗೆ ಒಟ್ಟು 4,835 ಜನ ಉದ್ಯೋಗಾಕಾಂಕ್ಷಿಗಳು ನೊಂದಾಯಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

Bagalakot job fair: 4835 expectant registered
ಬಾಗಲಕೋಟೆ ಉದ್ಯೋಗ ಮೇಳ: 4835 ಜನ ನೋಂದಣಿ
author img

By

Published : Feb 26, 2020, 3:54 PM IST

Updated : Feb 26, 2020, 4:00 PM IST

ಬಾಗಲಕೋಟೆ: ವಿದ್ಯಾಗಿರಿಯ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿರುವ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ಫೆಬ್ರವರಿ 27 ಮತ್ತು 28 ರಂದು ಎರಡು ದಿನಗಳ ಕಾಲ ಜರುಗಲಿರುವ ಉದ್ಯೋಗ ಮೇಳಕ್ಕೆ ಇಲ್ಲಿವರೆಗೆ ಒಟ್ಟು 4,835 ಜನ ಉದ್ಯೋಗಾಕಾಂಕ್ಷಿಗಳು ನೋಂದಾಯಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

Bagalakot job fair: 4835 expectant registered
ಬಾಗಲಕೋಟೆ ಉದ್ಯೋಗ ಮೇಳ: 4,835 ಜನ ನೋಂದಣಿ

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಉದ್ಯೋಗ ಮೇಳದಲ್ಲಿ ಅಂದಾಜು 5 ಸಾವಿರ ಉದ್ಯೋಗಾಕಾಂಕ್ಷಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಇಲ್ಲಿವರೆಗೆ ಒಟ್ಟು 4,835 ಉದ್ಯೋಗಾಕಾಂಕ್ಷಿಗಳು ಉದ್ಯೋಗಕ್ಕಾಗಿ ನೋಂದಾಯಿಸಿಕೊಂಡಿದ್ದಾರೆ. 45ಕ್ಕೂ ಹೆಚ್ಚು ಕಂಪನಿಗಳು ಈಗಾಗಲೇ ನೋಂದಣಿ ಮಾಡಿಕೊಂಡಿವೆ. ಇನ್ನು ಹೆಚ್ಚಿಗೆ ಬರುವ ನಿರೀಕ್ಷೆ ಇರುವುದಾಗಿ ತಿಳಿಸಿದರು.

ವಿವಿಧ ಕಂಪನಿಗಳಿಂದ ಪಡೆದ ಮಾಹಿತಿಗಳ ಪ್ರಕಾರ ಅಂದಾಜು 2,800 ಕ್ಕೂ ಅಧಿಕ ವಿವಿಧ ಹುದ್ದೆಗಳಿಗೆ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳುವವರಿದ್ದಾರೆ. 7ನೇ ತರಗತಿ, ಎಸ್. ಎಸ್. ಎಲ್. ಸಿ ವಿವಿಧ ಪದವಿ ಹಾಗೂ ಡಿಪ್ಲೋಮಾ ಸೇರಿದಂತೆ ವೃತ್ತಿಪರ ಕೋರ್ಸಗಳನ್ನು ಪೂರೈಸಿರುವ ಅಭ್ಯರ್ಥಿಗಳಿಗೂ ಉದ್ಯೋಗಾವಕಾಶಗಳು ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಲ್ಲ ಕೌಶಲ್ಯ ಕೇಂದ್ರಗಳಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ ಎಂದರು.

ಹೆಸರು ನೋಂದಣಿಗೆ ಫೆಬ್ರವರಿ 25 ಕೊನೆಯ ದಿನವಾಗಿತ್ತು. ಅನಿವಾರ್ಯ ಕಾರಣಗಳಿಂದ ಆನ್‍ಲೈನ್‍ನಲ್ಲಿ ನೋಂದಣಿಯಾಗದೇ ಇರುವ ಅಭ್ಯರ್ಥಿಗಳು ಉದ್ಯೋಗ ಮೇಳ ನಡೆಯುವ ಸ್ಥಳದಲ್ಲೇ ಸ್ಥಾಪಿಸಲಾಗುವ ಕೌಂಟರ್​ಗಳಲ್ಲಿ ತಮ್ಮ ಹೆಸರುಗಳ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಭಾಗವಹಿಸುವ ಅಭ್ಯರ್ಥಿಗಳು ವಿದ್ಯಾರ್ಹತೆಯ ನಕಲು ದಾಖಲಾತಿಗಳು, ಅನುಭವ ಪ್ರಮಾಣ ಪತ್ರ ಹಾಗೂ ಸ್ವ - ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗಬಹುದಾಗಿದೆ ಎಂದರು.

ಉದ್ಯೋಗ ಮೇಳಕ್ಕೆ ಆಗಮಿಸುವ ಉದ್ಯೋಗಾಕಾಂಕ್ಷಿಗಳಿಗೆ ಅಲ್ಪೋಪಹಾರದ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರಿಗೆ ಮತ್ತು ವಿಶೇಷ ಚೇತನರಿಗೆ ಪ್ರತ್ಯೇಕ ನೋಂದಣಿ ಕೌಂಟರ್ ತೆರೆಯಲಾಗಿದೆ. ಉದ್ಯೋಗ ಮೇಳ ಆವರಣದಲ್ಲಿ ಪ್ರಥಮ ಚಿಕಿತ್ಸೆ ಮತ್ತು ಆ್ಯಂಬುಲೆನ್ಸ್​ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಉದ್ಯೋಗದಾತರಿಗೆ ಮತ್ತು ಉದ್ಯೋಗಾಕಾಂಕ್ಷಿಗಳ ವಾಹನ ನಿಲುಗಡೆಗೆ ಕಾಳಿದಾಸ ಶಿಕ್ಷಣ ಸಂಸ್ಥೆಯ ಆವರಣ ಮತ್ತು ಕಲ್ಯಾಣ ಮಂಟಪದ ಆವರಣದಲ್ಲಿ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದರು.

ಜಿಲ್ಲೆಯ ಬೇರೆ ಬೇರೆ ಊರಿನಿಂದ ಬರುವ ಉದ್ಯೋಗಾಕಾಂಕ್ಷಿಗಳ ಅನುಕೂಲಕ್ಕಾಗಿ ಎಲ್ಲ ಬಸ್​​​​ಗಳನ್ನು ವಿದ್ಯಾಗಿರಿಯ ಇಂಜಿನಿಯರಿಂಗ್ ಕಾಲೇಜು ಸರ್ಕಲ್‍ಗೆ ನಿಲುಗಡೆ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸುವುದಲ್ಲದೇ ಅವರು ಕೆಲಸ ಮಾಡುತ್ತಿರುವ ಬಗ್ಗೆ ಜಾಬ್ ಟ್ರ್ಯಾಕಿಂಗ್ ಕೂಡಾ ಮಾಡಲಾಗುತ್ತಿದೆ ಎಂದು ತಿಳಿಸಿದರು.

Last Updated : Feb 26, 2020, 4:00 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.