ETV Bharat / state

ಬಾಗಲಕೋಟೆಯಲ್ಲಿಂದು 333 ಮಂದಿ ಸೋಂಕಿನಿಂದ ಗುಣಮುಖ - ಬಾಗಲಕೋಟೆಯಲ್ಲಿಂದು 333 ಮಂದಿ ಸೋಂಕಿನಿಂದ ಗುಣಮುಖ

ಜಿಲ್ಲೆಯ ಕೋವಿಡ್ ಸೋಂಕಿತ ಪ್ರಕರಣಗಳು, ಗುಣಮುಖರಾದವರು ಹಾಗು ಮರಣ ಹೊಂದಿದವರ ವಿವರ ಇಲ್ಲಿದೆ.

bagalakote
bagalakote
author img

By

Published : Aug 10, 2020, 10:18 PM IST

ಬಾಗಲಕೋಟೆ: ಜಿಲ್ಲೆಯಲ್ಲಿ 333 ಜನ ಕೋವಿಡ್‍ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಹೊಸದಾಗಿ 147 ಕೊರೊನಾ ಪ್ರಕರಣಗಳು ಸೋಮವಾರ ದೃಢಪಟ್ಟಿವೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,207 ಕ್ಕೆ ಏರಿಕೆಯಾಗಿದೆ. ಈ ಪೈಕಿ ಇಲ್ಲಿಯವರೆಗೆ ಒಟ್ಟು 1,975 ಜನ ಕೋವಿಡ್‍ನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಹೊಸದಾಗಿ ಇಂದು ಸೋಂಕು ದೃಢಪಟ್ಟವರನ್ನು ನಿಗದಿತ‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.1,016 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 666 ಜನ ನಿಗಾದಲ್ಲಿದ್ದಾರೆ.

ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 35,696 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 31,195 ನೆಗೆಟಿವ್ ಪ್ರಕರಣ, 3,207 ಪಾಸಿಟಿವ್ ಪ್ರಕರಣ ಹಾಗೂ 55 ಜನ ಮೃತ ಪ್ರಕರಣ ವರದಿಯಾಗಿರುತ್ತದೆ.

ಇನ್ನು 1,180 ಸಕ್ರಿಯ ಪ್ರಕರಣಗಳಿವೆ. ಇಲ್ಲಿವರೆಗೆ ಒಟ್ಟು 187 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 159 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾರಂಟೈನ್‍ನಲ್ಲಿದ್ದ 8,237 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.