ಬಾಗಲಕೋಟೆ: ಜಿಲ್ಲೆಯಲ್ಲಿ 162 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಹೊಂದಿದ್ದು, ಹೊಸದಾಗಿ 143 ಕೊರೊನಾ ಪ್ರಕರಣಗಳು ಗುರುವಾರ ದೃಢಪಟ್ಟಿವೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 3655 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಒಟ್ಟು 2507 ಜನ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನ 20, ಬಾದಾಮಿ 15, ಹುನಗುಂದ 7, ಬೀಳಗಿ 23, ಮುಧೋಳ 35, ಜಮಖಂಡಿ 43 ಜನ ಇದ್ದು, ಅವರನ್ನು ನಿಗದಿತ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯ 861 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 616 ಜನ ನಿಗಾದಲ್ಲಿದ್ದಾರೆ. ಇಲ್ಲಿಯವರೆಗೆ ಒಟ್ಟು 40559 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 35756 ನೆಗಟಿವ್ ಪ್ರಕರಣ, 3655 ಪಾಸಿಟಿವ್ ಪ್ರಕರಣ ಹಾಗೂ 55 ಜನ ಮೃತ ಪ್ರಕರಣ ವರದಿಯಾಗಿರುತ್ತದೆ.
ಇನ್ನು 1095 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಒಟ್ಟು 192 ಸ್ಯಾಂಪಲ್‍ಗಳು ರಿಜೆಕ್ಟ ಆಗಿವೆ. ಜಿಲ್ಲಯಲ್ಲಿ ಒಟ್ಟು 159 ಕಂಟೈನ್ಮೆಂಟ್ ವಲಯಗಳಿವೆ. ಇನ್‍ಸ್ಟಿಟ್ಯೂಶನ್ ಕ್ವಾಂರಂಟೈನ್‍ನಲ್ಲಿದ್ದ 8287 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.