ಬಾಗಲಕೋಟೆ: ಜಿಲ್ಲೆಯಲ್ಲಿಂದು 145 ಜನ ಸೋಂಕಿತರು ಗುಣಮುಖರಾಗಿದ್ದು, ಹೊಸದಾಗಿ 97 ಕೊರೊನಾ ಪ್ರಕರಣಗಳು ಹಾಗೂ ಒಂದು ಮೃತ ಪ್ರಕರಣ ದೃಢ ಪಟ್ಟಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 10,826 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 9777 ಜನ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 25, ಬಾದಾಮಿ 22, ಹುನಗುಂದ 15, ಬೀಳಗಿ 4, ಮುಧೋಳ 16, ಜಮಖಂಡಿ 15 ಜನರಲ್ಲಿ ಸೋಂಕು ದೃಡಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್ನಲ್ಲಿ ಪರೀಕ್ಷಿಸಲಾಗುತ್ತಿದ್ದ 1197 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 1,13,756 ಸ್ಯಾಂಪಲ್ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 1,01,222 ನೆಗಟಿವ್ ಪ್ರಕರಣ, 10,826 ಪಾಸಿಟಿವ್ ಪ್ರಕರಣ ಹಾಗೂ 110 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 939 ಮಾತ್ರ ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.