ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಹೊಸದಾಗಿ 126 ಪ್ರಕರಣಗಳು ಪತ್ತೆಯಾಗಿವೆ.
ಬಾಗಲಕೋಟೆ ತಾಲೂಕಿನಲ್ಲಿ 32, ಬಾದಾಮಿ 17, ಹುನಗುಂದ 4, ಬೀಳಗಿ 5, ಮುಧೋಳ 30, ಜಮಖಂಡಿ 37, ಬೇರೆ ಜಿಲ್ಲೆಯ 1 ಪ್ರಕರಣ ದಾಖಲಾಗಿದೆ. ಜಿಲ್ಲೆಯಿಂದ ಕಳುಹಿಸಲಾದ ಒಟ್ಟು 189 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 874 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 23,369 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 21,347 ನೆಗೆಟಿವ್ ಪ್ರಕರಣ, 1,591 ಪಾಸಿಟಿವ್ ಪ್ರಕರಣ ಹಾಗೂ 44 ಜನ ಮೃತಪಟ್ಟಿದ್ದಾರೆ.
ಕೋವಿಡ್-19ನಿಂದ ಒಟ್ಟು 908 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನು 639 ಸಕ್ರಿಯ ಪ್ರಕರಣಗಳಿವೆ. ಇಲ್ಲಿವರೆಗೆ ಒಟ್ಟು 160 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 129 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾರಂಟೈನ್‍ನಲ್ಲಿದ್ದ 7343 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.